2 Kings 19:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೆಹೋವನು ಅಶ್ಶೂರದ ರಾಜನನ್ನು ಕುರಿತು ಹೀಗೆನ್ನುತ್ತಾನೆ: ಅವನು ಈ ನಗರದೊಳಕ್ಕೆ ಬರುವುದಿಲ್ಲ. ಅವನು ಈ ನಗರದಲ್ಲಿ ಒಂದು ಬಾಣವನ್ನೂ ಎಸೆಯುವುದಿಲ್ಲ. ಅವನು ಈ ನಗರದ ವಿರುದ್ಧ ಗುರಾಣಿಗಳೊಂದಿಗೆ ಬರುವುದಿಲ್ಲ. ಅವನು ಈ ನಗರವನ್ನು ಮುತ್ತಲು ಮಣ್ಣಿನ ದಿಬ್ಬವನ್ನು ನಿರ್ಮಿಸುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಅಶ್ಶೂರದ ಅರಸನ ವಿಷಯವಾಗಿ, “ನನ್ನ ಮಾತನ್ನು ಕೇಳು ಅವನು ಪಟ್ಟಣವನ್ನು ಸಮೀಪಿಸುವುದಿಲ್ಲ. ಅದಕ್ಕೆ ಬಾಣವನ್ನೆಸೆಯುವುದಿಲ್ಲ. ಗುರಾಣಿ ಹಿಡಿದಿರುವವರನ್ನು ಕಳುಹಿಸುವುದಿಲ್ಲ. ಅದನ್ನು ಕೆಡವಿಬಿಡುವುದಕ್ಕೋಸ್ಕರ ಅದರ ಎದುರಾಗಿ ಮಣ್ಣಿನ ದಿಬ್ಬವನ್ನು ಸೃಷ್ಟಿಸುವುದಿಲ್ಲ.
Kannada BSI Bible 2016
ಆದ ದರಿಂದ ಕರ್ತನು ಅಶ್ಶೂರಿನ ಅರಸನನ್ನು ಕುರಿತು ಹೇಳುವದೇನಂದರೆ--ಅವನು ಈ ಪಟ್ಟಣದಲ್ಲಿ ಬರು ವದಿಲ್ಲ; ಅಲ್ಲಿ ಬಾಣವನ್ನು ಎಸೆಯುವದಿಲ್ಲ; ಗುರಾಣಿ ಹಿಡಿದುಕೊಂಡು ಅದರ ಮುಂದೆ ಸೇರುವದಿಲ್ಲ; ಅದಕ್ಕೆ ವಿರೋಧವಾಗಿ ದಿನ್ನೆಯನ್ನು ಹಾಕುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಅಶ್ಶೂರದ ಅರಸನ ವಿಷಯವಾಗಿ - ನನ್ನ ಮಾತನ್ನು ಕೇಳು, ಅವನು ಪಟ್ಟಣವನ್ನು ಸಮೀಪಿಸುವದಿಲ್ಲ, ಅದಕ್ಕೆ ಬಾಣವನ್ನೆಸೆಯುವದಿಲ್ಲ, ಗುರಾಣಿಹಿಡಿದಿರುವವರನ್ನು ಕಳುಹಿಸುವದಿಲ್ಲ, ಅದನ್ನು ಕೆಡವಿಬಿಡುವದಕ್ಕೋಸ್ಕರ ಅದರ ಎದುರಾಗಿ ಮಣ್ಣಿನ ದಿಬ್ಬವನ್ನು ಮಾಡುವದಿಲ್ಲ.
Kannada Bible (KNCL) BSI 2016
“ಅಸ್ಸೀರಿಯದ ಅರಸನನ್ನು ಕುರಿತು ಸರ್ವೇಶ್ವರ ಹೇಳಿರುವ ಮಾತಿದು: ‘ಅವನು ಪಟ್ಟಣವನ್ನು ಸಮೀಪಿಸುವುದಿಲ್ಲ, ಅದರತ್ತ ಬಾಣವನ್ನೆಸೆಯುವುದಿಲ್ಲ, ಕವಚಧಾರಿಗಳನ್ನು ಕಳುಹಿಸುವುದಿಲ್ಲ. ಅದರ ಆಕ್ರಮಣಕ್ಕಾಗಿ ಮಣ್ಣುದಿಬ್ಬಗಳನ್ನು ಎಬ್ಬಿಸುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದ್ದರಿಂದ ಯೆಹೋವ ದೇವರು ಅಸ್ಸೀರಿಯದ ಅರಸನನ್ನು ಕುರಿತು ಹೀಗೆ ಹೇಳುತ್ತಾರೆ: “ ‘ಅವನು ಈ ಪಟ್ಟಣದೊಳಗೆ ಬರುವುದಿಲ್ಲ; ಅಲ್ಲಿ ಬಾಣವನ್ನು ಎಸೆಯುವುದಿಲ್ಲ; ಗುರಾಣಿಯೊಂದಿಗೆ ಅದರ ಮುಂದೆ ಬರಲಾರನು; ಅದಕ್ಕೆ ವಿರೋಧವಾಗಿ ಮುತ್ತಿಗೆ ಹಾಕಲು ದಿಬ್ಬವನ್ನು ನಿರ್ಮಿಸುವುದಿಲ್ಲ.