2 Kings 19:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ರಾತ್ರಿ ಯೆಹೋವನ ದೂತನು ಹೊರಕ್ಕೆ ಹೋಗಿ, ಅಶ್ಶೂರದ ಶಿಬಿರದಲ್ಲಿ ಒಂದು ಲಕ್ಷದ ಎಂಭತ್ತೈದು ಸಾವಿರ ಜನರನ್ನು ಕೊಂದುಹಾಕಿದನು. ಜನರು ಬೆಳಗಿನ ಜಾವದಲ್ಲಿ ಮೇಲಕ್ಕೆದ್ದಾಗ ಸತ್ತ ದೇಹಗಳನ್ನು ನೋಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದೇ ರಾತ್ರಿಯಲ್ಲಿ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯದ ಪಾಳೆಯದಲ್ಲಿ ಒಂದು ಲಕ್ಷದ ಎಂಭತ್ತೈದು ಸಾವಿರ ಸೈನಿಕರನ್ನು ಸಂಹರಿಸಿದನು. ಅಶ್ಶೂರ್ಯರು ಬೆಳಿಗ್ಗೆ ಎದ್ದು ನೋಡಿದಾಗ ಪಾಳೆಯದ ತುಂಬಾ ಹೆಣಗಳು ಬಿದ್ದಿದ್ದವು.
Kannada BSI Bible 2016
ಅದೇ ರಾತ್ರಿಯಲ್ಲಿ ಏನಾಯಿತಂದರೆ, ಕರ್ತನ ದೂತನು ಹೊರಟು ಅಶ್ಶೂರಿನ ದಂಡಿನಲ್ಲಿ ಒಂದು ಲಕ್ಷ ಎಂಭತ್ತೈದು ಸಾವಿರ ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ ಇಗೋ, ಅವರೆಲ್ಲರೂ ಸತ್ತು ಹೆಣಗಳಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದೇ ರಾತ್ರಿಯಲ್ಲಿ ಯೆಹೋವನ ದೂತನು ಹೊರಟುಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರಮಂದಿ ಸೈನಿಕರನ್ನು ಸಂಹರಿಸಿದನು. ಅಶ್ಶೂರ್ಯರು ಬೆಳಿಗ್ಗೆ ಎದ್ದು ನೋಡುವಲ್ಲಿ ಪಾಳೆಯತುಂಬಾ ಹೆಣಗಳಿದ್ದವು.
Kannada Bible (KNCL) BSI 2016
ಅದೇ ರೀತಿಯಲ್ಲಿ ಸರ್ವೇಶ್ವರಸ್ವಾಮಿಯ ದೂತನು ಹೊರಟುಬಂದು ಅಸ್ಸೀರಿಯರ ಪಾಳೆಯದಲ್ಲಿ 185,000 ಮಂದಿ ಸೈನಿಕರನ್ನು ಮರಣಕ್ಕೆ ಈಡುಮಾಡಿದನು; ಅಸ್ಸೀರಿಯರು ಬೆಳಿಗ್ಗೆ ಎದ್ದು ನೋಡುವಾಗ ಪಾಳೆಯ ತುಂಬ ಹೆಣಗಳು ಇದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದೇ ರಾತ್ರಿಯಲ್ಲಿ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು.