2 Kings 19:37 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸನ್ಹೇರೀಬನು ಒಂದು ದಿನ ತನ್ನ ದೇವರಾದ ನಿಸ್ರೋಕನನ್ನು ಆಲಯದಲ್ಲಿ ಆರಾಧಿಸುತ್ತಿದ್ದನು. ಅವನ ಮಕ್ಕಳಾದ ಅದ್ರಮ್ಮೆಲೆಕ್ ಮತ್ತು ಸರೆಚೆರ್ ಅವನನ್ನು ಖಡ್ಗದಿಂದ ಇರಿದುಕೊಂದರು. ನಂತರ ಅದ್ರಮ್ಮೆಲೆಕ್ ಮತ್ತು ಸರೆಚೆರ್ ಅರರಾಟ್ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಸನ್ಹೇರೀಬನ ಮಗನಾದ ಏಸರ್‌ಹದ್ದೋನನು ಅವನ ನಂತರ ಹೊಸ ರಾಜನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಒಂದು ದಿನ ದೇವಾಲಯಕ್ಕೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಆರಾಧಿಸುತ್ತಿದ್ದಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬುವವರು ಅವನನ್ನು ಕತ್ತಿಯಿಂದ ಕೊಂದು ಅರರಾಟ್ ದೇಶಕ್ಕೆ ಓಡಿಹೋದರು. ಅವನ ನಂತರ ಅವನ ಮಗನಾದ ಏಸರ್ ಹದ್ದೋನನು ಅರಸನಾದನು.
Kannada BSI Bible 2016
ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಆರಾಧಿಸುತ್ತಿರುವಾಗ ಅವನ ಮಕ್ಕಳಾದ ಅದ್ರಮ್ಮೆಲೆಕನೂ ಸರೆಚೆರನೂ ಅವನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಅವನ ಮಗನಾದ ಏಸರ್‌ಹದ್ದೋನನು ಅವನಿಗೆ ಬದಲಾಗಿ ಅರಸನಾದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಒಂದು ದಿವಸ ಗುಡಿಗೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಆರಾಧಿಸುತ್ತಿರುವಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬವರು ಅವನನ್ನು ಕತ್ತಿಯಿಂದ ಕೊಂದು ಅರಾರಾಟ್ ದೇಶಕ್ಕೆ ಓಡಿಹೋದರು. ಅವನಿಗೆ ಬದಲಾಗಿ ಅವನ ಮಗನಾದ ಏಸರ್‍ಹದ್ದೋನನು ಅರಸನಾದನು.
Kannada Bible (KNCL) BSI 2016
ಒಂದು ದಿನ ಗುಡಿಗೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಆರಾಧನೆ ಮಾಡುತ್ತಿರುವಾಗ, ಅದ್ರಮ್ಮೆಲೆಕ್ ಮತ್ತು ಸರೆಚೆರ್ ಎಂಬವರು ಅವನನ್ನು ಕತ್ತಿಯಿಂದ ಕೊಂದು ಅರರಾಟ್ ದೇಶಕ್ಕೆ ಪಲಾಯನ ಗೈದರು. ಅವನ ಸ್ಥಾನದಲ್ಲಿ ಅವನ ಮಗ ಏಸರ್ ಹದ್ದೋನನು ಅರಸನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ದಿನ ಅವನು ತನ್ನ ದೇವರಾದ ನಿಸ್ರೋಕನ ಆಲಯದಲ್ಲಿ ಆರಾಧನೆ ಮಾಡುತ್ತಿರುವಾಗ, ಅವನ ಮಕ್ಕಳಾದ ಅದ್ರಮ್ಮೆಲೆಕ್, ಸರೆಚೆರ್ ಎಂಬವರು ಅವನನ್ನು ಖಡ್ಗದಿಂದ ಕೊಂದು, ಅರಾರಾಟ್ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಅವನ ಮಗ ಏಸರ್‌ಹದ್ದೋನನು ಅವನಿಗೆ ಬದಲಾಗಿ ಅರಸನಾದನು.