2 Kings 19:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೇನಾಧಿಪತಿಯ ಒಡೆಯನಾದ ಅಶ್ಶೂರದ ರಾಜನು, ಜೀವಸ್ವರೂಪನಾದ ದೇವರ ಬಗ್ಗೆ ಕೆಟ್ಟದ್ದನ್ನು ನುಡಿಯಲು ಅವನನ್ನು ಕಳುಹಿಸಿದನು. ನಿಮ್ಮ ದೇವರಾದ ಯೆಹೋವನು ಅವುಗಳನ್ನೆಲ್ಲ ಕೇಳಿರುತ್ತಾನೆ. ಯೆಹೋವನು ಶತ್ರುಗಳನ್ನು ತಪ್ಪಿತಸ್ಥರೆಂದು ನಿರ್ಧರಿಸಬಹುದು! ಆದ್ದರಿಂದ ಇನ್ನೂ ಜೀವಸಹಿತ ಉಳಿದಿರುವ ಜನರಿಗಾಗಿ ಪ್ರಾರ್ಥಿಸಿ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜೀವಸ್ವರೂಪನಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದನೆಯ ಮಾತುಗಳನ್ನು, ನಿನ್ನ ದೇವರಾದ ಯೆಹೋವನು ಕೇಳಿರುವನು. ನಿನ್ನ ದೇವರಾದ ಯೆಹೋವನು ತಾನು ಹೇಳಿದ ಮಾತುಗಳ ನಿಮಿತ್ತ ಮುಯ್ಯಿತೀರಿಸುವನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗಾಗಿಯಾದರೂ ಆತನನ್ನು ಪ್ರಾರ್ಥಿಸು ಎಂಬುದಾಗಿ ಹಿಜ್ಕೀಯನು ಹೇಳುತ್ತಾನೆ” ಎಂದು ಹೇಳಿರಿ ಅಂದನು.
Kannada BSI Bible 2016
ಒಂದು ವೇಳೆ ನಿನ್ನ ದೇವರಾದ ಕರ್ತನು, ಜೀವವುಳ್ಳ ದೇವ ರನ್ನು ನಿಂದಿಸಲು ತನ್ನ ಯಜಮಾನನಾದ ಅಶ್ಶೂರಿನ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ಮಾತುಗಳನ್ನು ಕೇಳಿ, ನಿನ್ನ ದೇವರಾದ ಕರ್ತನು ಕೇಳಿದ ಅವನ ಮಾತುಗಳಿಗೋಸ್ಕರ ಅವನನ್ನು ಗದರಿಸುವನು. ಆದ ದರಿಂದ ನೀನು ಉಳಿದವರಿಗೋಸ್ಕರ ಪ್ರಾರ್ಥನೆ ಸಲ್ಲಿಸಬೇಕು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜೀವಸ್ವರೂಪನಾದ ದೇವರನ್ನು ದೂಷಿಸುವದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ನಿನ್ನ ದೇವರಾದ ಯೆಹೋವನು ಕೇಳಿರುವನು; ನಿನ್ನ ದೇವರಾದ ಯೆಹೋವನು ತಾನು ಹೇಳಿದ ವಾಕ್ಯಗಳ ನಿವಿುತ್ತ ಮುಯ್ಯಿತೀರಿಸಾನು. ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿರಿ ಎಂಬದೇ.
Kannada Bible (KNCL) BSI 2016
ಜೀವಸ್ವರೂಪರಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನ ಅಸ್ಸೀರಿಯದ ರಾಜನಿಂದ ಕಳುಹಿಸಲಾಗಿದ್ದ ರಬ್ಷಾಕೆಯ ನಿಂದಾವಾಕ್ಯಗಳನ್ನು ನಿಮ್ಮ ದೇವರಾದ ಸರ್ವೇಶ್ವರ ಕೇಳಿದ್ದಾರೆ. ನಿಮ್ಮ ದೇವರಾದ ಸರ್ವೇಶ್ವರ ತಾವು ಕೇಳಿದ ಆ ವಾಕ್ಯಗಳ ನಿಮಿತ್ತ ಮುಯ್ಯಿತೀರಿಸಾರು; ಹೀಗಿರಲು ಉಳಿದಿರುವ ಸ್ವಲ್ಪ ಜನರಿಗಾಗಿ ದೇವರನ್ನು ನೀವು ಪ್ರಾರ್ಥನೆ ಮಾಡಿ’ ಎಂದು ಹಿಜ್ಕೀಯ ಕೇಳಿಕೊಂಡಿದ್ದಾರೆ ಎಂದು ತಿಳಿಸಿ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜೀವಿಸುವ ದೇವರನ್ನು ನಿಂದಿಸಲು ಅಸ್ಸೀರಿಯದ ಅರಸನಿಂದ ಕಳುಹಿಸಲಾಗಿದ್ದ ಸೈನ್ಯಾಧಿಕಾರಿಯ ನಿಂದೆಯ ಮಾತುಗಳನ್ನು ನಿನ್ನ ದೇವರಾದ ಯೆಹೋವ ದೇವರು ಕೇಳಿದ್ದಾರೆ. ನಿನ್ನ ದೇವರಾದ ಯೆಹೋವ ದೇವರು ಅವನ ಮಾತುಗಳಿಗೋಸ್ಕರ ಅವನನ್ನು ಗದರಿಸುವರು. ಆದ್ದರಿಂದ ನೀನು ಉಳಿದಿರುವ ಜನರಿಗಾಗಿ ಅವರನ್ನು ಪ್ರಾರ್ಥಿಸು,’ ” ಎಂದರು.