2 Kings 19:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಶಾಯನು ಅವರಿಗೆ, “ನಿಮ್ಮ ಒಡೆಯನಾದ ಹಿಜ್ಕೀಯನಿಗೆ ಈ ಸಂದೇಶವನ್ನು ತಿಳಿಸಿ: ‘ಯೆಹೋವನು ಹೀಗೆನ್ನುತ್ತಾನೆ: ಅಶ್ಶೂರದ ರಾಜನ ಅಧಿಕಾರಿಗಳು ನನ್ನನ್ನು ಅಪಹಾಸ್ಯಮಾಡಲೆಂದು ಹೇಳಿದ ಸಂಗತಿಗಳಿಂದ ನೀವು ಹೆದರಬೇಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಶಾಯನು ಅವರಿಗೆ, “ನೀವು ಹಿಂತಿರುಗಿ ಹೋಗಿ ನಿಮ್ಮ ರಾಜನಿಗೆ, ‘ಯೆಹೋವನು ಹೀಗೆ ಹೇಳುತ್ತಾನೆ, ನೀನು ಕೇಳಿದ ಮಾತುಗಳ ದೆಸೆಯಿಂದ ಹೆದರಬೇಡ, ಅಶ್ಶೂರದ ಅರಸನ ಸೇವಕರು ಆ ಮಾತುಗಳಿಂದ ನನ್ನನ್ನೇ ದೂಷಿಸಿದ್ದಾರೆ.
Kannada BSI Bible 2016
ಆಗ ಯೆಶಾಯನು ಅವರಿಗೆ -- ನೀವು ನಿಮ್ಮ ಯಜಮಾನನಿಗೆ ಹೇಳಬೇಕಾದದ್ದೇನಂದರೆ -- ನೀನು ಕೇಳಿದಂಥ, ಅಶ್ಶೂರಿನ ಅರಸನ ಸೇವಕರು ನನ್ನನ್ನು ದೂಷಿಸಿದಂಥ, ಮಾತುಗಳನ್ನು ನೀವು ಕೇಳಿದ್ದಕ್ಕೋಸ್ಕರ ಭಯಪಡಬೇಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಕೇಳಿದ ಮಾತುಗಳ ದೆಸೆಯಿಂದ ಹೆದರಬೇಡ; ಅಶ್ಶೂರದ ಅರಸನ ಸೇವಕರು ಆ ಮಾತುಗಳಿಂದ ನನ್ನನ್ನೇ ದೂಷಿಸಿದ್ದಾರೆ.
Kannada Bible (KNCL) BSI 2016
“ನೀವು ಹಿಂದಿರುಗಿ ಹೋಗಿ ನಿಮ್ಮ ರಾಜನಿಗೆ, ‘ಅಸ್ಸೀರಿಯದ ಅರಸನ ಸೇವಕರು ನನ್ನನ್ನು ದೂಷಿಸಿ ಆಡಿದ ಮಾತುಗಳನ್ನು ಕೇಳಿದ್ದೇನೆ. ಅವುಗಳಿಗಾಗಿ ನೀನು ಹೆದರಬೇಕಾಗಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಶಾಯನು ಅವರಿಗೆ, “ನೀವು ನಿಮ್ಮ ಯಜಮಾನನಿಗೆ ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ, ನೀನು ಕೇಳಿದಂಥ ಅಸ್ಸೀರಿಯದ ಅರಸನ ಸೇವಕರು ನನ್ನನ್ನು ದೂಷಿಸಿದಂಥ ಮಾತುಗಳನ್ನು ನೀವು ಕೇಳಿದ್ದಕ್ಕೋಸ್ಕರ ಭಯಪಡಬೇಡಿರಿ.