2 Kings 19:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಅವನಲ್ಲಿ ಒಂದು ಆತ್ಮವನ್ನಿರಿಸುತ್ತೇನೆ. ಅವನು ಒಂದು ಸುದ್ದಿಯನ್ನು ಕೇಳುತ್ತಾನೆ. ನಂತರ ಅವನು ತನ್ನ ಸ್ವಂತ ದೇಶಕ್ಕೆ ಹಿಂದಿರುಗಿ ಓಡಿಹೋಗುತ್ತಾನೆ. ನಾನು ಅವನನ್ನು ಅವನ ಸ್ವಂತ ದೇಶದಲ್ಲಿ ಖಡ್ಗದಿಂದ ಕೊಲ್ಲಲ್ಪಡುವಂತೆ ಮಾಡುತ್ತೇನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ, ನಾನು ಅವನ ಮೇಲೆ ಭಯದ ಆತ್ಮವನ್ನು ಬರಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ಸ್ವದೇಶಕ್ಕೆ ಹಿಂದಿರುಗಿ ಹೋಗಿ ಅಲ್ಲಿ ಕತ್ತಿಯಿಂದ ನಾಶವಾಗುವಂತೆ ಮಾಡುವೆನು’ ಎಂಬುದಾಗಿ ಯೆಹೋವನು ನಿಮ್ಮ ಯಜಮಾನನಿಗೆ ಹೇಳುತ್ತಾನೆ” ಎಂದು ಉತ್ತರಕೊಟ್ಟನು.
Kannada BSI Bible 2016
ಇಗೋ, ನಾನು ಅವನ ಮೇಲೆ ಗಾಳಿಯನ್ನು ಕಳುಹಿಸುವೆನು. ಅವನು ಒಂದು ಸುದ್ದಿ ಯನ್ನು ಕೇಳಿ ತನ್ನ ದೇಶಕ್ಕೆ ಹಿಂತಿರುಗುವನು. ಇದಲ್ಲದೆ ತನ್ನ ದೇಶದಲ್ಲಿ ಕತ್ತಿಯಿಂದ ಅವನನ್ನು ಬೀಳಮಾಡು ವೆನು ಎಂದು ಕರ್ತನು ಹೇಳುತ್ತಾನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ನಾನು ಅವನ ಮೇಲೆ [ಭಯದ] ಆತ್ಮವನ್ನು ಬರಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ತಿರುಗಿಕೊಂಡು ಸ್ವದೇಶಕ್ಕೆ ಹೋಗಿ ಅಲ್ಲಿ ಕತ್ತಿಯಿಂದ ಸಂಹೃತನಾಗುವಂತೆ ಮಾಡುವೆನು ಎಂಬದಾಗಿ ಯೆಹೋವನು ನಿಮ್ಮ ಯಜಮಾನನಿಗೆ ಹೇಳುತ್ತಾನೆ ಎಂದು ಉತ್ತರಕೊಟ್ಟನು.
Kannada Bible (KNCL) BSI 2016
ಅವನ ಮೇಲೆ ಭಯಾತ್ಮನನ್ನು ಬರಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ಸ್ವದೇಶಕ್ಕೆ ಹಿಂದಿರುಗಿ ಅಲ್ಲೇ ಕತ್ತಿಗೆ ತುತ್ತಾಗುವಂತೆ ಮಾಡುವೆನು, ಇದು ಸರ್ವೇಶ್ವರನ ನುಡಿ, ಎಂದು ತಿಳಿಸಿರಿ,” ಎಂದು ಉತ್ತರಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಗೋ, ನಾನು ಅವರ ಮೇಲೆ ಆತ್ಮವನ್ನು ಕಳುಹಿಸುವೆನು. ಅವನು ಒಂದು ಸುದ್ದಿಯನ್ನು ಕೇಳಿ ತನ್ನ ದೇಶಕ್ಕೆ ಹಿಂದಿರುಗುವನು. ಇದಲ್ಲದೆ ಅವನು ತನ್ನ ದೇಶದಲ್ಲಿ ಖಡ್ಗಕ್ಕೆ ತುತ್ತಾಗುವಂತೆ ಮಾಡುವೆನು,’ ” ಎಂದು ಹೇಳಿದನು.