2 Kings 19:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಶ್ಶೂರದ ರಾಜನು ಲಾಕೀಷನ್ನು ಬಿಟ್ಟುಹೋದನೆಂಬ ಸುದ್ದಿಯನ್ನು ಸೇನಾಧಿಪತಿಯು ಕೇಳಿ ಲಿಬ್ನಕ್ಕೆ ಹೋದಾಗ ರಾಜನು ಲಿಬ್ನದ ವಿರುದ್ಧ ಯುದ್ಧ ಮಾಡುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರಬ್ಷಾಕೆಯು ಹಿಂದಿರುಗಿ ಹೋಗುವಾಗ ದಾರಿಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನ ಕೇಳಿ ಲಿಬ್ನಕ್ಕೆ ಹೋಗಿ, ಅಲ್ಲಿ ಅವನನ್ನು ಕಂಡನು. ಆಗ ಅವನು ಆ ಪಟ್ಟಣಕ್ಕೆ ವಿರುದ್ಧವಾಗಿ ಯುದ್ಧಮಾಡುತ್ತಾ ಇದ್ದನು.
Kannada BSI Bible 2016
ರಬ್ಷಾಕೆಯು ತಿರಿಗಿ ಹೋಗುತ್ತಿರುವಾಗ ಲಿಬ್ನದ ಮೇಲೆ ಯುದ್ಧಮಾಡುತ್ತಿರುವ ಅಶ್ಶೂರಿನ ಅರಸನನ್ನು ಕಂಡುಕೊಂಡನು. ಲಾಕೀಷನ್ನು ಬಿಟ್ಟನೆಂದು ಕೇಳಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ರಬ್ಷಾಕೆಯು ಹಿಂದಿರುಗಿ ಹೋಗುವಾಗ ದಾರಿಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನ ಕೇಳಿ ಲಿಬ್ನಕ್ಕೆ ಹೋಗಿ ಅಲ್ಲಿ ಅವನನ್ನು ಕಂಡನು. ಆಗ ಅವನು ಆ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುತ್ತಾ ಇದ್ದನು.
Kannada Bible (KNCL) BSI 2016
ರಬ್ಷಾಕೆಯು ಹಿಂದಿರುಗಿ ಹೋಗುವಾಗ ದಾರಿಯಲ್ಲಿ, ಅಸ್ಸೀರಿಯದ ಅರಸನು ಲಾಕೀಷನನ್ನು ಬಿಟ್ಟು ಲಿಬ್ನಕ್ಕೆ ಹೋಗಿ ಆ ರಾಜ್ಯದ ವಿರುದ್ಧ ಯುದ್ಧಮಾಡುತ್ತಿರುವುದಾಗಿ ಸಮಾಚಾರ ಪಡೆದನು. ಆದುದರಿಂದ ಅವನು ಅಲ್ಲಿಗೆ ತೆರಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಸೈನ್ಯಾಧಿಕಾರಿಯು ಅಸ್ಸೀರಿಯದ ಅರಸನು ಲಾಕೀಷನ್ನು ಬಿಟ್ಟು ಹೊರಟಿದ್ದಾನೆಂದು ಕೇಳಿದಾಗ, ಅವನು ಲಿಬ್ನಕ್ಕೆ ಹೋಗಿ, ಅಲ್ಲಿ ಅರಸನು ಲಿಬ್ನದವರೊಂದಿಗೆ ಯುದ್ಧಮಾಡುತ್ತಿರುವುದನ್ನು ಕಂಡನು.