2 Kings 19:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಥಿಯೋಪಿಯದ ರಾಜ ತಿರ್ಹಾಕನ ಬಗ್ಗೆ ಅಶ್ಶೂರದ ರಾಜ ಒಂದು ಗಾಳಿ ಸುದ್ದಿಯನ್ನು ಕೇಳಿದನು. “ತಿರ್ಹಾಕನು ನಿನ್ನ ವಿರುದ್ಧ ಹೋರಾಡಲು ಬಂದಿದ್ದಾನೆ” ಎಂಬುದೇ ಆ ಗಾಳಿಸುದ್ದಿಯಾಗಿತ್ತು. ಆದ್ದರಿಂದ ಅಶ್ಶೂರದ ರಾಜನು ಹಿಜ್ಕೀಯನ ಬಳಿಗೆ ಮತ್ತೆ ಸಂದೇಶಕರನ್ನು ಕಳುಹಿಸಿದನು. ಅಶ್ಶೂರದ ರಾಜನು ಈ ಸಂದೇಶಕರಿಗೆ ಒಂದು ಸಂದೇಶವನ್ನು ನೀಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಷ್ಟರಲ್ಲಿ ಐಗುಪ್ತದ ಅರಸನೂ ಮತ್ತು ಕೂಷಿನ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡಲು ಹೊರಟಿದ್ದಾನೆ ಎಂಬ ಸುದ್ದಿಯನ್ನು ಸನ್ಹೇರೀಬನು ಕೇಳಿದಾಗ, ಯೆಹೂದದ ಅರಸನಾದ ಹಿಜ್ಕೀಯನ ಬಳಿಗೆ ಪುನಃ ದೂತರನ್ನು ಕಳುಹಿಸಿ,
Kannada BSI Bible 2016
ಆಗ ಅವನು ಕೂಷಿನ ಅರಸನಾದ ತಿರ್ಹಾಕನನ್ನು ಕುರಿತು--ಇಗೋ, ಅವನು ನಿನ್ನ ಮೇಲೆ ಯುದ್ಧ ಮಾಡಲು ಹೊರಟಿದ್ದಾನೆಂದು ಕೇಳಿದಾಗ ತಿರಿಗಿ ಹಿಜ್ಕೀ ಯನ ಬಳಿಗೆ ಸೇವಕರನ್ನು ಕಳುಹಿಸಿ ಹೇಳಿದ್ದೇನಂದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಅಷ್ಟರಲ್ಲಿ ಕೂಷಿನ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಹೊರಟಿದ್ದಾನೆಂಬ ಸುದ್ದಿಯನ್ನು ಕೇಳಿ ಯೆಹೂದದ ಅರಸನಾದ ಹಿಜ್ಕೀಯನ ಬಳಿಗೆ ತಿರಿಗಿ ದೂತರನ್ನು ಕಳುಹಿಸಿ
Kannada Bible (KNCL) BSI 2016
ಅಷ್ಟರಲ್ಲಿ ಸುಡಾನಿನ ರಾಜ ತಿರ್ಹಾಕನು ತನಗೆ ವಿರುದ್ಧವಾಗಿ ಹೊರಟಿದ್ದಾನೆ ಎಂಬ ಸುದ್ದಿ ಅಸ್ಸೀರಿಯದ ಅರಸನಿಗೆ ಮುಟ್ಟಿತು. ಆಗ ಅವನು ಜುದೇಯದ ಅರಸನಾದ ಹಿಜ್ಕೀಯನಿಗೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಷ್ಟರಲ್ಲಿ ಕೂಷನ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಹೊರಟಿದ್ದಾನೆಂಬ ಸುದ್ದಿಯನ್ನು ಅಸ್ಸೀರಿಯದ ಅರಸನು ಕೇಳಿ, ಹಿಜ್ಕೀಯನ ಬಳಿಗೆ ತಿರಿಗಿ ದೂತರನ್ನು ಕಳುಹಿಸಿ ಅವರಿಗೆ,