2 Kings 2:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಲೀಷನೊಡನೆ ಗಿಲ್ಗಾಲಿನಿಂದ ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಎಲೀಯನನ್ನು ಸುಂಟರಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಸೇರಿಸಿಕೊಳ್ಳುವ ಸಮಯ ಬಂದಾಗ ಎಲೀಯನು ಎಲೀಷನೊಡನೆ ಗಿಲ್ಗಾಲನ್ನು ಬಿಟ್ಟು ಹೊರಟನು.
Kannada BSI Bible 2016
ಕರ್ತನು ಎಲೀಯನನ್ನು ಬಿರುಗಾಳಿಯಿಂದ ಆಕಾಶಕ್ಕೆ ಎತ್ತಿಕೊಳ್ಳುವಾಗ ಎಲೀಯನು ಎಲೀಷನ ಸಂಗಡ ಗಿಲ್ಗಾಲಿನಿಂದ ಹೋಗುತ್ತಾ ಇದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಎಲೀಯನನ್ನು ಸುಳಿಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಸೇರಿಸುವ ಸಮಯ ಬಂದಾಗ ಎಲೀಯನು ಎಲೀಷನೊಡನೆ ಗಿಲ್ಗಾಲನ್ನು ಬಿಟ್ಟು ಹೊರಟನು.
Kannada Bible (KNCL) BSI 2016
ಸರ್ವೇಶ್ವರಸ್ವಾಮಿ ಎಲೀಯನನ್ನು ಸುಂಟರಗಾಳಿಯಲ್ಲಿ ಪರಲೋಕಕ್ಕೆ ಸೇರಿಸುವ ಸಮಯ ಬಂದಿತು. ಆಗ ಎಲೀಯನು ಎಲೀಷನೊಡನೆ ಗಿಲ್ಗಾಲನ್ನು ಬಿಟ್ಟು ಹೊರಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಎಲೀಯನನ್ನು ಬಿರುಗಾಳಿಯಿಂದ ಆಕಾಶಕ್ಕೆ ಎತ್ತಿಕೊಳ್ಳುವಾಗ, ಎಲೀಯನು ಎಲೀಷನ ಸಂಗಡ ಗಿಲ್ಗಾಲಿನಿಂದ ಹೋಗುತ್ತಾ ಇದ್ದನು.