2 Kings 2:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲೀಯನು, “ನೀನು ಕಷ್ಟಕರವಾದುದನ್ನು ಬೇಡಿಕೊಂಡೆ. ನಿನ್ನಿಂದ ನನ್ನನ್ನು ತೆಗೆದುಕೊಳ್ಳುವಾಗ ನೀನು ನನ್ನನ್ನು ಕಂಡರೆ, ಅದು ನಿನಗೆ ದೊರೆಯುವುದು. ಆದರೆ ನಿನ್ನಿಂದ ನನ್ನನ್ನು ತೆಗೆದುಕೊಳ್ಳುವಾಗ ನೀನು ನನ್ನನ್ನು ಕಾಣದಿದ್ದರೆ, ಅದು ನಿನಗೆ ದೊರೆಯುವುದಿಲ್ಲ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಎಲೀಯನು ಅವನಿಗೆ, “ನೀನು ಕಷ್ಟಕರವಾದುದ್ದನ್ನು ಕೇಳಿಕೊಂಡಿರುವೆ. ಆದರೂ ನಾನು ನಿನ್ನ ಬಳಿಯಿಂದ ತೆಗೆಯಲ್ಪಡುವಾಗ ನೀನು ನನ್ನನ್ನು ನೋಡುವುದಾದರೆ ಅದು ನಿನಗೆ ದೊರಕುವುದು. ಇಲ್ಲವಾದರೆ ದೊರಕುವುದಿಲ್ಲ” ಎಂದನು.
Kannada BSI Bible 2016
ಅದಕ್ಕ ವನು--ನೀನು ಕಠಿಣವಾದದ್ದನ್ನು ಕೇಳಿದಿ; ಆದಾಗ್ಯೂ ನಾನು ನಿನ್ನ ಬಳಿಯಿಂದ ತೆಗೆಯಲ್ಪಡುವಾಗ ನೀನು ನನ್ನನ್ನು ನೋಡುವದಾದರೆ ನಿನಗೆ ದೊರಕುವದು; ಇಲ್ಲದಿದ್ದರೆ ದೊರಕುವುದಿಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಎಲೀಯನು ಅವನಿಗೆ - ನೀನು ದುರ್ಲಭವಾದದ್ದನ್ನು ಕೇಳಿಕೊಂಡಿ; ಆದರೂ ನಾನು ನಿನ್ನ ಬಳಿಯಿಂದ ತೆಗೆಯಲ್ಪಡುವಾಗ ನೀನು ನನ್ನನ್ನು ನೋಡುವದಾದರೆ ಅದು ದೊರಕುವದು; ಇಲ್ಲವಾದರೆ ದೊರಕುವದಿಲ್ಲ ಅಂದನು.
Kannada Bible (KNCL) BSI 2016
ಆಗ ಎಲೀಯನು, “ನೀನು ದುರ್ಲಭವಾದದ್ದನ್ನು ಕೇಳಿಕೊಂಡೆ; ಆದರೂ ನನ್ನನ್ನು ನಿನ್ನ ಬಳಿಯಿಂದ ತೆಗೆಯಲಾಗುವಾಗ ನೀನು ನನ್ನನ್ನು ನೋಡುವುದಾದರೆ ಅದು ದೊರಕುವುದು; ಇಲ್ಲವಾದರೆ ದೊರಕುವುದಿಲ್ಲ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕವನು, “ನೀನು ಕಠಿಣವಾದದ್ದನ್ನು ಕೇಳಿದೆ. ಆದಾಗ್ಯೂ ನಿನ್ನ ಬಳಿಯಿಂದ ತೆಗೆಯಲಾಗುವಾಗ ನೀನು ನನ್ನನ್ನು ಕಂಡರೆ, ನಿನಗೆ ಅದು ದೊರಕುವುದು, ಇಲ್ಲದಿದ್ದರೆ, ದೊರಕುವುದಿಲ್ಲ,” ಎಂದನು.