2 Kings 2:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಲೀಯ ಮತ್ತು ಎಲೀಷ ಒಟ್ಟಿಗೆ ನಡೆಯುತ್ತಾ ಮಾತನಾಡುತ್ತಿದ್ದರು. ಇದ್ದಕ್ಕಿದ್ದಂತೆ, ಕೆಲವು ಕುದುರೆಗಳು ಮತ್ತು ರಥಗಳು ಬಂದು ಎಲೀಯನನ್ನು ಎಲೀಷನಿಂದ ಬೇರ್ಪಡಿಸಿದವು. ಆ ಕುದುರೆಗಳು ಮತ್ತು ರಥಗಳು ಬೆಂಕಿಯಂತಿದ್ದವು! ನಂತರ ಎಲೀಯನು ಸುಂಟರ ಗಾಳಿಯಲ್ಲಿ ಪರಲೋಕಕ್ಕೆ ಏರಿಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಮಾತನಾಡುತ್ತಾ ಮುಂದೆ ಹೋಗುತ್ತಿರುವಾಗ, ಪಕ್ಕನೆ ಅಗ್ನಿಮಯವಾದ ರಥಗಳು ನಡುವೆ ಬಂದು ಅವರಿಬ್ಬರನ್ನು ಬೇರ್ಪಡಿಸಿದವು. ಎಲೀಯನು ಸುಂಟರಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಏರಿ ಹೋದನು.
Kannada BSI Bible 2016
ಅವರು ನಡೆದು ಬಂದು ಮಾತನಾಡಿಕೊಂಡಿರುವಾಗ ಆದದ್ದೇನಂದರೆ, ಇಗೋ, ಬೆಂಕಿಯ ರಥವೂ ಬೆಂಕಿಯ ಕುದುರೆ ಗಳೂ ಅವರಿಬ್ಬರನ್ನು ವಿಂಗಡಿಸಿದವು; ಎಲೀಯನು ಬಿರುಗಾಳಿಯಲ್ಲಿ ಆಕಾಶಕ್ಕೆ ಏರಿಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಮಾತಾಡುತ್ತಾ ಮುಂದೆ ಹೋಗುತ್ತಿರುವಾಗ ಫಕ್ಕನೆ ಅಗ್ನಿಮಯವಾದ ರಥರಥಾಶ್ವಗಳು ನಡುವೆ ಬಂದು ಅವರನ್ನು ವಿಂಗಡಿಸಿದವು. ಎಲೀಯನು ಸುಳಿಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಹೋದನು.
Kannada Bible (KNCL) BSI 2016
ಅವರು ಮಾತನಾಡುತ್ತಾ ಮುಂದೆ ಹೋಗುತ್ತಿರುವಾಗ ಫಕ್ಕನೆ ಅಗ್ನಿಮಯವಾದ ರಥರಥಾಶ್ವಗಳು ನಡುವೆ ಬಂದು ಅವರನ್ನು ವಿಂಗಡಿಸಿದವು. ಎಲೀಯನು ಸುಂಟರಗಾಳಿಯಲ್ಲಿ ಪರಲೋಕಕ್ಕೆ ಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ನಡೆಯುತ್ತಾ ಬಂದು ಮಾತನಾಡಿಕೊಂಡಿರುವಾಗ, ಬೆಂಕಿಯ ರಥವೂ ಬೆಂಕಿಯ ಕುದುರೆಗಳೂ ಅವರಿಬ್ಬರನ್ನೂ ಬೇರೆಯಾಗಿ ಮಾಡಿದವು. ಎಲೀಯನು ಬಿರುಗಾಳಿಯಲ್ಲಿ ಆಕಾಶಕ್ಕೆ ಏರಿಹೋದನು.