2 Kings 2:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲೀಷನು ಅದನ್ನು ನೋಡಿ, “ನನ್ನ ತಂದೆಯೇ! ನನ್ನ ತಂದೆಯೇ! ಇಸ್ರೇಲಿಗೆ ರಥರಥಾಶ್ವಗಳೂ ಮತ್ತು ಅಶ್ವದಳವೂ ಆಗಿದ್ದವನೇ!” ಎಂದು ಕೂಗಿಕೊಂಡನು. ಎಲೀಷನು ಎಲೀಯನನ್ನು ಮತ್ತೆ ನೋಡಲಿಲ್ಲ. ಎಲೀಷನು ತನ್ನ ಬಟ್ಟೆಗಳನ್ನು ಹಿಡಿದುಕೊಂಡು, ತನ್ನ ದುಃಖವನ್ನು ತೋರ್ಪಡಿಸಲು ಅವುಗಳನ್ನು ಹರಿದು ತುಂಡುತುಂಡು ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲೀಷನು ಅದನ್ನು ನೋಡುತ್ತಾ, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲರಿಗೆ ರಥಾರಥಾಶ್ವಗಳಾಗಿದ್ದವನೇ” ಎಂದು ಕೂಗಿಕೊಂಡನು. ಎಲೀಯನು ತನಗೆ ಕಾಣಿಸದೆ ಹೋದ ಮೇಲೆ ತನ್ನ ಬಟ್ಟೆಗಳನ್ನು ಹರಿದು ಎರಡು ತುಂಡುಮಾಡಿದನು.
Kannada BSI Bible 2016
ಎಲೀ ಷನು ಅದನ್ನು ನೋಡಿ--ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥವೇ, ಅದರ ಕುದುರೆ ರಾಹುತರಾಗಿದ್ದವನೇ ಎಂದು ಕೂಗಿದನು. ಮತ್ತೆ ಅವ ನನ್ನು ಕಾಣಲಿಲ್ಲ. ಆಗ ಅವನು ತನ್ನ ವಸ್ತ್ರಗಳನ್ನು ತೆಗೆದು ಎರಡು ತುಂಡಾಗಿ ಹರಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲೀಷನು ಅದನ್ನು ನೋಡುತ್ತಾ - ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲ್ಯರಿಗೆ ರಥರಥಾಶ್ವಗಳಾಗಿದ್ದವನೇ ಎಂದು ಕೂಗಿ ಎಲೀಯನು ತನಗೆ ಕಾಣಿಸದೆ ಹೋದ ಮೇಲೆ ತನ್ನ ಬಟ್ಟೆಗಳನ್ನು ಹರಿದು ಎರಡು ತುಂಡುಮಾಡಿದನು.
Kannada Bible (KNCL) BSI 2016
ಎಲೀಷನು ಅದನ್ನು ನೋಡುತ್ತಾ, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಯೇಲರಿಗೆ ರಥರಥಾಶ್ವಗಳಾಗಿದ್ದವರೇ,” ಎಂದು ಕೂಗಿಕೊಂಡನು. ಎಲೀಯನು ತನಗೆ ಕಾಣಿಸದೆ ಹೋದಮೇಲೆ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದು ಎರಡು ತುಂಡುಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಲೀಷನು ಅದನ್ನು ಕಂಡು, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥ ಮತ್ತು ಸಾರಥಿಯಾದ್ದಾತನೇ!” ಎಂದು ಕೂಗಿದನು. ಮತ್ತೆ ಅವನನ್ನು ಕಾಣಲಿಲ್ಲ. ಆಗ ಅವನು ತನ್ನ ವಸ್ತ್ರಗಳನ್ನು ತೆಗೆದು ಎರಡು ತುಂಡುತುಂಡಾಗಿ ಹರಿದನು.