2 Kings 2:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಲೀಷನು ನೀರನ್ನು ಹೊಡೆದಾಗ, ನೀರು ಎರಡು ಭಾಗವಾಗಿ ಬಲಗಡೆಯಲ್ಲೂ ಎಡಗಡೆಯಲ್ಲೂ ನಿಂತುಕೊಂಡಿತು! ಎಲೀಷನು ನದಿಯನ್ನು ದಾಟಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಎಲೀಯನ ದೇವರಾದ ಯೆಹೋವನೆಲ್ಲಿ?” ಎಂದು ಅಂದುಕೊಂಡು, ಆ ಕಂಬಳಿಯಿಂದ ನೀರನ್ನು ಹೊಡೆಯಲು ಅದು ಎರಡು ಭಾಗವಾಯಿತು. ಎಲೀಷನು ಹೊಳೆಯನ್ನು ದಾಟಿಹೋದನು.
Kannada BSI Bible 2016
ಎಲೀಯನಿಂದ ಬಿದ್ದ ಹೊದಿಕೆಯನ್ನು ತಕ್ಕೊಂಡು ನೀರನ್ನು ಹೊಡೆದು--ಎಲೀಯನ ದೇವರಾದ ಕರ್ತನು ಎಲ್ಲಿದ್ದಾನೆ ಅಂದನು. ಅವನು ಹಾಗೆ ನೀರನ್ನು ಹೊಡೆದ ತರುವಾಯ ಅದು ಎರಡು ಭಾಗವಾದದ್ದರಿಂದ ಎಲೀ ಷನು ದಾಟಿಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲೀಯನ ದೇವರಾದ ಯೆಹೋವನೆಲ್ಲಿ ಅಂದುಕೊಂಡು ಆ ಕಂಬಳಿಯಿಂದ ನೀರನ್ನು ಹೊಡೆಯಲು ಅದು ಎರಡು ಭಾಗವಾಯಿತು; ಅವನು ದಾಟಿಹೋದನು.
Kannada Bible (KNCL) BSI 2016
“ಎಲೀಯನ ದೇವರಾದ ಸರ್ವೇಶ್ವರನೆಲ್ಲಿ?” ಎಂದುಕೊಂಡು ಆ ಕಂಬಳಿಯಿಂದ ನೀರನ್ನು ಹೊಡೆದನು. ಅದು ಇಬ್ಭಾಗ ಆಯಿತು. ಅವನು ದಾಟಿಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಲೀಯನಿಂದ ಬಿದ್ದ ಹೊದಿಕೆಯನ್ನು ತೆಗೆದುಕೊಂಡು ನೀರನ್ನು ಹೊಡೆದು, “ಎಲೀಯನ ದೇವರಾದ ಯೆಹೋವ ದೇವರು ಎಲ್ಲಿ?” ಎಂದನು. ಅವನು ಹಾಗೆ ನೀರನ್ನು ಹೊಡೆದ ತರುವಾಯ, ಅದು ಬಲಗಡೆಗೂ ಎಡಗಡೆಗೂ ವಿಭಾಗವಾದದ್ದರಿಂದ, ಎಲೀಷನು ದಾಟಿಹೋದನು.