2 Kings 2:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜೆರಿಕೊದಲ್ಲಿ ಪ್ರವಾದಿಗಳ ಗುಂಪೊಂದು ಎಲೀಷನನ್ನು ಕಂಡು, “ಎಲೀಯನ ಆತ್ಮವು ಈಗ ಎಲೀಷನ ಮೇಲಿದೆ!” ಎಂದು ಹೇಳಿ ಎಲೀಷನನ್ನು ಭೇಟಿಮಾಡಲು ಬಂದರು. ಅವರು ಎಲೀಷನಿಗೆ ಸಾಷ್ಟಾಂಗನಮಸ್ಕಾರ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೂರದಲ್ಲಿ ನಿಂತಿದ್ದ ಯೆರಿಕೋವಿನ ಪ್ರವಾದಿ ಮಂಡಳಿಯವರು ಇದನ್ನು ಕಂಡು, “ಎಲೀಯನಿಗಿದ್ದ ಆತ್ಮವು ಎಲೀಷನ ಮೇಲೆ ಬಂದಿದೆ” ಎಂದು ತಿಳಿದುಕೊಂಡು ಅವನನ್ನು ಎದುರುಗೊಂಡು, ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು.
Kannada BSI Bible 2016
ಯೆರಿಕೋವಿನ ಬಳಿಯಲ್ಲಿ ಎದುರಾಗಿದ್ದ ಪ್ರವಾದಿಗಳ ಮಕ್ಕಳು ಅವನನ್ನು ಕಂಡಾಗ--ಎಲೀಯನ ಆತ್ಮನು ಎಲೀಷನ ಮೇಲೆ ನಿಂತಿರುವನು ಎಂದು ಹೇಳಿ ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗನಮಸ್ಕಾರಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೂರದಲ್ಲಿ ನಿಂತಿದ್ದ ಯೆರಿಕೋವಿನ ಪ್ರವಾದಿ ಮಂಡಲಿಯವರು ಇದನ್ನು ಕಂಡು ಎಲೀಯನಿಗಿದ್ದ ಆತ್ಮವು ಎಲೀಷನ ಮೇಲೆ ಬಂದಿತೆಂದು ತಿಳಿದುಕೊಂಡು ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗ ನಮಸ್ಕಾರಮಾಡಿದರು.
Kannada Bible (KNCL) BSI 2016
ದೂರದಲ್ಲಿ ನಿಂತಿದ್ದ ಜೆರಿಕೋವಿನ ಪ್ರವಾದಿಮಂಡಲಿಯವರು ಇದನ್ನು ಕಂಡು, “ಎಲೀಯನಿಗಿದ್ದ ಆತ್ಮಶಕ್ತಿ ಎಲೀಷನ ಮೇಲೆ ಬಂದು ನೆಲಸಿದೆ,” ಎಂದು ತಿಳಿದುಕೊಂಡರು. ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆರಿಕೋವಿನ ಬಳಿಯಲ್ಲಿ ಎದುರಾಗಿದ್ದ ಪ್ರವಾದಿಗಳ ಗುಂಪು ಅವನನ್ನು ಕಂಡಾಗ, “ಎಲೀಯನ ಆತ್ಮವು ಎಲೀಷನ ಮೇಲೆ ನಿಂತಿರುವುದು,” ಎಂದು ಹೇಳಿ, ಎದುರುಗೊಳ್ಳಲು ಬಂದು, ಅವನ ಮುಂದೆ ನೆಲದವರೆಗೂ ಅಡ್ಡಬಿದ್ದರು.