2 Kings 2:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಎಲೀಷನು ನೆಲೆಸಿದ್ದ ಜೆರಿಕೊವಿಗೆ ಹೋದರು. ಅವರು ಎಲೀಯನನ್ನು ಕಂಡುಹಿಡಿಯಲಾಗಲಿಲ್ಲವೆಂದು ಎಲೀಷನಿಗೆ ಹೇಳಿದರು. ಎಲೀಷನು ಅವರಿಗೆ, “ನಾನು ನಿಮಗೆ ಹೋಗಬೇಡವೆಂದು ಹೇಳಿದೆನಲ್ಲ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇನ್ನೂ ಯೆರಿಕೋವಿನಲ್ಲೇ ಇದ್ದ ಎಲೀಷನ ಬಳಿಗೆ ಬಂದರು. ಎಲೀಷನು ಅವರಿಗೆ, ಹೋಗಬೇಡಿರಿ ಎಂದು ನಾನು ಹೇಳಲಿಲ್ಲವೋ? ಎಂದನು.
Kannada BSI Bible 2016
ಅವನು ಇನ್ನೂ ಯೆರಿಕೋವಿನಲ್ಲಿದ್ದಾಗ ಅವರು ತಿರುಗಿ ಅವನ ಬಳಿಗೆ ಬಂದರು. ಆಗ ಅವನು ಇವ ರಿಗೆ--ಹೋಗಬೇಡಿರೆಂದು ನಾನು ನಿಮಗೆ ಹೇಳ ಲಿಲ್ಲವೋ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇನ್ನೂ ಯೆರಿಕೋವಿನಲ್ಲೇ ಇದ್ದ ಎಲೀಷನ ಬಳಿಗೆ ಬಂದರು; ಅವನು ಅವರಿಗೆ - ಹೋಗಬೇಡಿರೆಂದು ನಾನು ಹೇಳಲಿಲ್ಲವೋ ಅಂದನು.
Kannada Bible (KNCL) BSI 2016
ಇನ್ನೂ ಜೆರಿಕೋವಿನಲ್ಲೇ ಇದ್ದ ಎಲೀಷನ ಬಳಿಗೆ ಅವರು ಬಂದರು. ಅವನು, “’ಹೋಗಬೇಡಿ,’ ಎಂದು ನಾನು ಹೇಳಲಿಲ್ಲವೇ?’ ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಯೆರಿಕೋವಿನಲ್ಲಿ ನಿಂತಿರುವಾಗ, ಅವರು ತಿರುಗಿ ಅವನ ಬಳಿಗೆ ಬಂದರು. ಆಗ ಅವನು ಅವರಿಗೆ, “ಹೋಗಬೇಡಿರೆಂದು ನಾನು ನಿಮಗೆ ಹೇಳಲಿಲ್ಲವೋ?” ಎಂದನು.