2 Kings 2:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲೀಷನು, “ಒಂದು ಹೊಸ ಬೋಗುಣಿಯನ್ನು ತಂದು ಅದರಲ್ಲಿ ಉಪ್ಪನ್ನು ಹಾಕಿ” ಎಂದನು. ಜನರು ಎಲೀಷನ ಬಳಿಗೆ ಒಂದು ಬೋಗುಣಿಯನ್ನು ತಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಎಲೀಷನು ಅವರಿಗೆ, “ಒಂದು ಹೊಸ ಮಡಿಕೆಯಲ್ಲಿ ಉಪ್ಪು ಹಾಕಿ ಅದನ್ನು ತಂದು ಕೊಡಿರಿ” ಎಂದು ಹೇಳಿದಾಗ, ಅವರು ತಂದುಕೊಟ್ಟರು.
Kannada BSI Bible 2016
ಅದಕ್ಕ ವನು--ನನ್ನ ಬಳಿಗೆ ಹೊಸ ಗಡಿಗೆಯನ್ನು ತಕ್ಕೊಂಡು ಬಂದು ಅದರಲ್ಲಿ ಉಪ್ಪು ಹಾಕಿರಿ ಅಂದನು. ಅವರು ಅದನ್ನು ಅವನ ಬಳಿಗೆ ತಕ್ಕೊಂಡು ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಎಲೀಷನು ಅವರಿಗೆ - ಒಂದು ಹೊಸ ಮಡಕೆಯಲ್ಲಿ ಉಪ್ಪು ಹಾಕಿ ಅದನ್ನು ತಂದುಕೊಡಿರಿ ಅಂದನು.
Kannada Bible (KNCL) BSI 2016
ಆಗ ಎಲೀಷನು, “ಒಂದು ಹೊಸ ಮಡಕೆಯಲ್ಲಿ ಉಪ್ಪು ಹಾಕಿ ಅದನ್ನು ತಂದುಕೊಡಿ,” ಎಂದನು. ಅವರು ತಂದುಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕವನು, “ನನ್ನ ಬಳಿಗೆ ಹೊಸ ಗಡಿಗೆಯನ್ನು ತೆಗೆದುಕೊಂಡು ಬಂದು ಅದರಲ್ಲಿ ಉಪ್ಪು ಹಾಕಿರಿ,” ಎಂದನು. ಅವರು ಅವನ ಬಳಿಗೆ ತೆಗೆದುಕೊಂಡು ಬಂದರು.