2 Kings 2:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ಎಲೀಷನು ನೆಲದಿಂದ ನೀರು ಹರಿಯುತ್ತಿದ್ದ ಸ್ಥಳಕ್ಕೆ ಹೋದನು. ಎಲೀಷನು ಉಪ್ಪನ್ನು ನೀರಿನಲ್ಲಿ ಎಸೆದು, “ನಾನು ಈ ನೀರನ್ನು ಶುಚಿಗೊಳಿಸಿದ್ದೇನೆ! ಇಲ್ಲಿಂದಾಚೆಗೆ ಈ ನೀರು ಯಾರಿಗೂ ಸಾವನ್ನು ಮತ್ತು ಬಂಜೆತನವನ್ನು ಉಂಟುಮಾಡುವುದಿಲ್ಲ ಮತ್ತು ಈ ಭೂಮಿಯಲ್ಲಿ ಬೆಳೆಗಳು ಬೆಳೆಯುತ್ತವೆ’ ಎಂದು ಯೆಹೋವನು ಹೇಳುತ್ತಾನೆ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಬುಗ್ಗೆಗೆ ಹೋಗಿ ಆ ನೀರಿನಲ್ಲಿ ಉಪ್ಪು ಹಾಕಿ, “ಇನ್ನು ಮುಂದೆ ಈ ನೀರಿನಿಂದ ಮರಣವೂ ಬಂಜೆತನವೂ ಉಂಟಾಗದಂತೆ ಇದರಲ್ಲಿದ್ದ ದೋಷವನ್ನೆಲ್ಲಾ ಪರಿಹರಿಸಿದ್ದೇನೆ ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳಿದನು.
Kannada BSI Bible 2016
ಅವನು ನೀರು ಬುಗ್ಗೆಯ ಬಳಿಗೆ ಹೊರಟುಹೋಗಿ ಅದರಲ್ಲಿ ಉಪ್ಪು ಹಾಕಿ ಹೇಳಿದ್ದೇನಂದರೆ--ಈ ನೀರನ್ನು ಶುದ್ಧ ಮಾಡಿದೆನು; ಇನ್ನು ಮೇಲೆ ಅದರಿಂದ ಮರಣವೂ ಬಂಜೆತನವೂ ಆಗದಿರಲೆಂದು ಕರ್ತನು ಹೇಳುತ್ತಾನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ತಂದುಕೊಡಲು ಅವನು ಬುಗ್ಗೆಗೆ ಹೋಗಿ ಆ ನೀರಿನಲ್ಲಿ ಉಪ್ಪು ಹಾಕಿ - ಇನ್ನು ಮುಂದೆ ಈ ನೀರಿನಿಂದ ಮರಣವೂ ಬಂಜೆತನವೂ ಉಂಟಾಗದಂತೆ ಇದರಲ್ಲಿದ್ದ ದೋಷವನ್ನೆಲ್ಲಾ ಪರಿಹರಿಸಿದ್ದೇನೆ ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳಿದನು.
Kannada Bible (KNCL) BSI 2016
ಅವನು ಬುಗ್ಗೆಗೆ ಹೋಗಿ ಆ ನೀರಿನಲ್ಲಿ ಉಪ್ಪುಹಾಕಿದನು; “’ಇನ್ನು ಮುಂದೆ ಈ ನೀರಿನಿಂದ ಮರಣವಾಗಲಿ ಗರ್ಭಪಾತವಾಗಲಿ ಸಂಭವಿಸದಂತೆ ಇದರಲ್ಲಿದ್ದ ದೋಷವನ್ನೆಲ್ಲಾ ಪರಿಹರಿಸಿದ್ದೇನೆ,’ ಎಂಬುದಾಗಿ ಸರ್ವೇಶ್ವರ ನುಡಿದಿದ್ದಾರೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ನೀರಿನ ಬುಗ್ಗೆಯ ಬಳಿಗೆ ಹೊರಟುಹೋಗಿ, ನೀರಿನಲ್ಲಿ ಉಪ್ಪು ಹಾಕಿ, “ ‘ಆ ನೀರನ್ನು ಶುದ್ಧಮಾಡಿದೆನು. ಇನ್ನು ಮೇಲೆ ಅದರಿಂದ ಮರಣವೂ, ಬಂಜೆತನವೂ ಆಗದಿರಲಿ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.