2 Kings 2:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಲೀಷನು ಆ ನಗರದಿಂದ ಬೇತೇಲಿಗೆ ಹೋದನು. ಎಲೀಷನು ನಗರದಿಂದ ಬೆಟ್ಟದ ಮೇಲಕ್ಕೆ ಹೋಗುತ್ತಿದ್ದಾಗ, ಕೆಲವು ಬಾಲಕರು ನಗರದ ಕಡೆಯಿಂದ ಇಳಿಯುತ್ತಿದ್ದರು. ಅವರು ಎಲೀಷನನ್ನು ಹಾಸ್ಯಮಾಡಿ, “ಮೇಲಕ್ಕೆ ಹೋಗು, ಬೋಳುತಲೆಯವನೇ, ಮೇಲಕ್ಕೆ ಹೋಗು, ಬೋಳುತಲೆಯವನೇ” ಎಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲೀಷನು ಅಲ್ಲಿಂದ ಬೇತೇಲಿಗೆ ಹೊರಟು ಅಲ್ಲಿನ ಗುಡ್ಡವನ್ನು ಹತ್ತುತ್ತಿರುವಾಗ, ಆ ಊರಿನ ಹುಡುಗರು ಹೊರಗೆ ಬಂದು, “ಬೋಳು ಮಂಡೆಯವನೇ ಏರಿ ಬಾ, ಬೋಳು ಮಂಡೆಯವನೇ ಏರಿ ಬಾ” ಎಂದು ಕೂಗಿ ಅವನನ್ನು ಪರಿಹಾಸ್ಯ ಮಾಡಿದರು.
Kannada BSI Bible 2016
ಅವನು ಆ ಸ್ಥಳವನ್ನು ಬಿಟ್ಟು ಬೇತೇಲಿಗೆ ಹೋದನು. ಅವನು ಮಾರ್ಗದಲ್ಲಿ ಏರಿ ಹೋಗುತ್ತಿ ರುವಾಗ ಚಿಕ್ಕ ಹುಡುಗರು ಪಟ್ಟಣದಿಂದ ಹೊರಟು ಬಂದು ಅವನನ್ನು ಹಾಸ್ಯಮಾಡಿ ಅವನಿಗೆ--ಬೋಳ ತಲೆಯವನೇ, ಏರಿ ಹೋಗು; ಬೋಳ ತಲೆಯವನೇ, ಏರಿ ಹೋಗು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲೀಷನು ಅಲ್ಲಿಂದ ಬೇತೇಲಿಗೆ ಹೊರಟು ಅಲ್ಲಿನ ಗುಡ್ಡವನ್ನು ಹತ್ತುತ್ತಿರುವಾಗ ಆ ಊರಿನ ಹುಡುಗರು ಹೊರಗೆ ಬಂದು - ಬೋಳಮಂಡೆಯವನೇ, ಏರು; ಬೋಳಮಂಡೆಯವನೇ, ಏರು ಎಂದು ಕೂಗಿ ಅವನನ್ನು ಪರಿಹಾಸ್ಯಮಾಡಿದರು.
Kannada Bible (KNCL) BSI 2016
ಎಲೀಷನು ಅಲ್ಲಿಂದ ಬೇತೇಲಿಗೆ ಹೊರಟನು. ಅಲ್ಲಿನ ಗುಡ್ಡವನ್ನು ಹತ್ತುತ್ತಿರುವಾಗ ಆ ಊರಿನ ಹುಡುಗರು ಹೊರಗೆ ಬಂದರು. “ಬೋಳು ತಲೆಯವನೇ, ಏರು; ಬೋಳುತಲೆಯವನೇ ಏರು,” ಎಂದು ಕೂಗಿ ಅವನನ್ನು ಅಣಕಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಆ ಸ್ಥಳವನ್ನು ಬಿಟ್ಟು ಬೇತೇಲಿಗೆ ಹೋದನು. ಅವನು ಮಾರ್ಗದಲ್ಲಿ ಏರಿ ಹೋಗುತ್ತಿರುವಾಗ, ಚಿಕ್ಕ ಹುಡುಗರು ಪಟ್ಟಣದಿಂದ ಹೊರಟುಬಂದು ಅವನನ್ನು ಹಾಸ್ಯಮಾಡಿ ಅವನಿಗೆ, “ಬೋಳು ತಲೆಯವನೇ, ಏರಿ ಹೋಗು; ಬೋಳು ತಲೆಯವನೇ, ಏರಿ ಹೋಗು,” ಎಂದರು.