2 Kings 2:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೇತೇಲಿನಲ್ಲಿ ಪ್ರವಾದಿಗಳ ಗುಂಪೊಂದು ಎಲೀಷನ ಬಳಿಗೆ ಬಂದು, ಅವನಿಗೆ, “ಯೆಹೋವನು ಈ ದಿನ ನಿನ್ನ ಒಡೆಯನನ್ನು ನಿನ್ನಿಂದ ತೆಗೆದುಕೊಳ್ಳುತ್ತಾನೆಂಬುದು ನಿನಗೆ ತಿಳಿದಿದೆಯೇ?” ಎಂದು ಕೇಳಿದರು. ಎಲೀಷನು, “ಹೌದು, ನನಗೆ ಅದು ತಿಳಿದಿದೆ. ಅದರ ಬಗ್ಗೆ ಮಾತನಾಡಬೇಡಿ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೇತೇಲಿನ ಪ್ರವಾದಿ ಮಂಡಳಿಯವರು ಎಲೀಷನನ್ನು ಎದುರುಗೊಂಡು ಅವನನ್ನು, “ಯೆಹೋವನು ಈ ಹೊತ್ತು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತೆಗೆದುಕೊಳ್ಳುವನೆಂಬುದು ನಿನಗೆ ಗೊತ್ತುಂಟೋ?” ಎಂದು ಕೇಳಿದರು. ಅದಕ್ಕೆ ಅವನು, “ಗೊತ್ತಿದೆ ನೀವು ಸುಮ್ಮನಿರಿ” ಎಂದನು.
Kannada BSI Bible 2016
ಆಗ ಬೇತೇಲಿನಲ್ಲಿರುವ ಪ್ರವಾದಿಗಳ ಮಕ್ಕಳು ಎಲೀಷನ ಬಳಿಗೆ ಬಂದು ಅವನಿಗೆ--ಇಂದು ಕರ್ತನು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತಕ್ಕೊಳ್ಳುವನೆಂದು ತಿಳಿದಿದ್ದೀಯೋ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಅವರಿಬ್ಬರೂ ಬೇತೇಲಿಗೆ ಹೋದರು. ಬೇತೇಲಿನ ಪ್ರವಾದಿಮಂಡಲಿಯವರು ಎಲೀಷನನ್ನು ಎದುರುಗೊಂಡು ಅವನನ್ನು - ಯೆಹೋವನು ಈಹೊತ್ತು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ಮೇಲಕ್ಕೆ ತೆಗೆದುಕೊಳ್ಳುವನೆಂಬದು ನಿನಗೆ ಗೊತ್ತುಂಟೋ ಎಂದು ಕೇಳಿದರು. ಅದಕ್ಕೆ ಅವನು -
Kannada Bible (KNCL) BSI 2016
ಬೇತೇಲಿನ ಪ್ರವಾದಿಮಂಡಲಿಯವರು ಎಲೀಷನನ್ನು ಭೇಟಿಯಾದರು. “ಸರ್ವೇಶ್ವರ ಈ ದಿನ ನಿಮ್ಮ ಗುರುವನ್ನು ನಿಮ್ಮ ಬಳಿಯಿಂದ ಮೇಲಕ್ಕೆ ತೆಗೆದುಕೊಳ್ಳುವರೆಂಬುದು ನಿಮಗೆ ಗೊತ್ತೇ?” ಎಂದು ಕೇಳಿದರು. ಅದಕ್ಕೆ ಎಲೀಷನು, “ನನಗೆ ಗೊತ್ತಿದೆ; ಆದರೆ ನೀವು ಸುಮ್ಮನಿರಿ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಬೇತೇಲಿನಲ್ಲಿರುವ ಪ್ರವಾದಿಗಳ ಗುಂಪು ಎಲೀಷನ ಬಳಿಗೆ ಬಂದು ಅವನಿಗೆ, “ಇಂದು ಯೆಹೋವ ದೇವರು ನಿನ್ನ ಯಜಮಾನನನ್ನು ನಿನ್ನಿಂದ ತೆಗೆದುಕೊಳ್ಳುವರೆಂದು ತಿಳಿದಿದ್ದೀಯೋ?” ಎಂದರು. ಅದಕ್ಕವನು, “ಹೌದು, ನಾನು ಕೂಡಾ ಬಲ್ಲೆ, ಸುಮ್ಮನೆ ಇರಿ,” ಎಂದನು.