2 Kings 2:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲೀಯನು ಎಲೀಷನಿಗೆ, “ದಯವಿಟ್ಟು ಇಲ್ಲಿಯೇ ಇರು, ಏಕೆಂದರೆ ಯೆಹೋವನು ಜೆರಿಕೊವಿಗೆ ಹೋಗುವಂತೆ ನನಗೆ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಆದರೆ ಎಲೀಷನು, “ಯೆಹೋವನಾಣೆ, ನಿನ್ನಾಣೆ, ನಾನು ನಿನ್ನನ್ನು ಬಿಟ್ಟಿರುವುದಿಲ್ಲವೆಂದು ಪ್ರಮಾಣ ಮಾಡುತ್ತೇನೆ!” ಎಂದು ಹೇಳಿದನು. ಇಬ್ಬರೂ ಜೆರಿಕೊವಿಗೆ ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಎಲೀಯನು ಎಲೀಷನಿಗೆ, “ನೀನು ಇಲ್ಲೇ ಇರು, ಯೆಹೋವನು ನನಗೆ ಯೆರಿಕೋವಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಆದರೆ ಎಲೀಷನು, “ಯೆಹೋವನಾಣೆ, ನಿನ್ನ ಜೀವದಾಣೆ ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ” ಎಂದು ಉತ್ತರ ಕೊಟ್ಟನು. ಎಲೀಷನು ಅವನ ಜೊತೆಯಲ್ಲಿ ಯೆರಿಕೋವಿಗೆ ಹೋದನು.
Kannada BSI Bible 2016
ಅದಕ್ಕ ವನು--ಹೌದು, ನಾನು ಕೂಡ ಬಲ್ಲೆ; ಸುಮ್ಮನೆ ಇರ್ರಿ ಅಂದನು. ಎಲೀಯನು ಅವನಿಗೆ--ಎಲೀಷನೇ, ನೀನು ದಯಮಾಡಿ ಇಲ್ಲೇ ಇರು; ಕರ್ತನು ನನ್ನನ್ನು ಯೆರಿಕೋ ವಿಗೆ ಕಳುಹಿಸುತ್ತಾನೆ ಅಂದನು. ಅದಕ್ಕವನು--ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದನು. ಹಾಗೆಯೇ ಅವರು ಯೆರಿಕೋವಿಗೆ ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗೊತ್ತುಂಟು, ಸುಮ್ಮನಿರ್ರಿ ಅಂದನು. ಎಲೀಯನು ಎಲೀಷನಿಗೆ - ದಯವಿಟ್ಟು ಇಲ್ಲೇ ಇರು; ಯೆಹೋವನು ನನಗೆ ಯೆರಿಕೋವಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾನೆ ಎಂದು ಹೇಳಿದನು. ಆದರೆ ಎಲೀಷನು - ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟುಹೋಗುವದಿಲ್ಲ ಎಂದು ಉತ್ತರಕೊಟ್ಟು ಅವನ ಜೊತೆಯಲ್ಲಿ ಯೆರಿಕೋವಿಗೆ ಹೋದನು.
Kannada Bible (KNCL) BSI 2016
ಎಲೀಯನು ಎಲೀಷನಿಗೆ, “ದಯವಿಟ್ಟು ಇಲ್ಲೇ ಇರು; ಸರ್ವೇಶ್ವರ ನನಗೆ ಜೆರಿಕೋವಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾರೆ,” ಎಂದು ಹೇಳಿದನು. ಆದರೆ ಎಲೀಷನು, “ಸರ್ವೇಶ್ವರನಾಣೆ, ನಿಮ್ಮ ಜೀವದಾಣೆ, ನಾನು ನಿಮ್ಮನ್ನು ಬಿಟ್ಟಿರುವುದಿಲ್ಲ,” ಎಂದು ಉತ್ತರಕೊಟ್ಟು ಅವನ ಜೊತೆಯಲ್ಲೇ ಜೆರಿಕೋವಿಗೆ ಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಎಲೀಯನು ಅವನಿಗೆ, “ಎಲೀಷನೇ, ನೀನು ದಯಮಾಡಿ ಇಲ್ಲೇ ಇರು. ಯೆಹೋವ ದೇವರು ನನ್ನನ್ನು ಯೆರಿಕೋವಿಗೆ ಕಳುಹಿಸುತ್ತಿದ್ದಾರೆ” ಎಂದನು. ಅದಕ್ಕವನು, “ಯೆಹೋವ ದೇವರ ಜೀವದಾಣೆ, ನನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವುದಿಲ್ಲ,” ಎಂದನು. ಹಾಗೆಯೇ ಅವರು ಯೆರಿಕೋವಿಗೆ ಬಂದರು.