2 Kings 2:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲೀಯನು ಎಲೀಷನಿಗೆ, “ದಯವಿಟ್ಟು ಇಲ್ಲಿಯೇ ಇರು, ಏಕೆಂದರೆ ಯೆಹೋವನು ಜೋರ್ಡನ್ ನದಿಗೆ ಹೋಗುವಂತೆ ನನಗೆ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಎಲೀಷನು, “ಯೆಹೋವನಾಣೆ, ನಿನ್ನಾಣೆ, ನಾನು ನಿನ್ನನ್ನು ಬಿಟ್ಟಿರುವುದಿಲ್ಲವೆಂದು ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು. ಅವರಿಬ್ಬರೂ ಮುಂದೆ ಸಾಗಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲೀಯನು ತಿರುಗಿ ಅವನಿಗೆ, “ನೀನು ಇಲ್ಲೇ ಇರು. ಯೆಹೋವನು ನನಗೆ ಯೊರ್ದನಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಅದಕ್ಕೆ ಎಲೀಷನು, “ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ” ಎಂದು ಉತ್ತರ ಕೊಟ್ಟನು. ಅನಂತರ ಅವರಿಬ್ಬರೂ ಹೊರಟು ಯೊರ್ದನ್ ಹೊಳೆಯ ದಡಕ್ಕೆ ಬಂದರು.
Kannada BSI Bible 2016
ಎಲೀಯನು ಅವನಿಗೆ--ನೀನು ದಯಮಾಡಿ ಇಲ್ಲೇ ಇರು; ಕರ್ತನು ನನ್ನನ್ನು ಯೊರ್ದ ನಿಗೆ ಕಳುಹಿಸುತ್ತಾನೆ ಅಂದನು. ಅದಕ್ಕವನು--ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದನು. ಹಾಗೆಯೇ ಅವರಿ ಬ್ಬರೂ ಮುಂದಕ್ಕೆ ನಡೆದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲೀಯನು ತಿರಿಗಿ ಅವನಿಗೆ - ದಯವಿಟ್ಟು ನೀನು ಇಲ್ಲೇ ಇರು; ಯೆಹೋವನು ನನಗೆ ಯೊರ್ದನಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾನೆ ಎಂದು ಹೇಳಿದನು. ಆಗ ಅವನು - ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟು ಹೋಗುವದಿಲ್ಲ ಎಂದು ಉತ್ತರಕೊಟ್ಟನು; ಆದದರಿಂದ ಇಬ್ಬರೂ ಹೊರಟು ಯೊರ್ದನ್ ಹೊಳೆಯ ದಡಕ್ಕೆ ಬಂದರು.
Kannada Bible (KNCL) BSI 2016
ಎಲೀಯನು ಮತ್ತೆ ಎಲೀಷನಿಗೆ, “ದಯವಿಟ್ಟು ನೀನು ಇಲ್ಲೆಯಿರು; ಸರ್ವೇಶ್ವರ ನನಗೆ ಜೋರ್ಡನಿಗೆ ಹೋಗಬೇಕೆಂದು ಆಜ್ಞಾಪಿಸಿ ಇದ್ದಾರೆ,” ಎಂದನು. ಆಗ ಅವನು, “ಸರ್ವೇಶ್ವರನ ಆಣೆ, ನಿಮ್ಮ ಜೀವದಾಣೆ, ನಾನು ನಿಮ್ಮನ್ನು ಬಿಟ್ಟಿರಲಾಗದು,” ಎಂದು ಉತ್ತರಕೊಟ್ಟನು. ಆದುದರಿಂದ ಇಬ್ಬರೂ ಹೊರಟು ಜೋರ್ಡನ್ ನದಿಯ ದಡಕ್ಕೆ ಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಲೀಯನು ಅವನಿಗೆ, “ನೀನು ದಯಮಾಡಿ ಇಲ್ಲೇ ಇರು. ಯೆಹೋವ ದೇವರು ನನ್ನನ್ನು ಯೊರ್ದನಿಗೆ ಕಳುಹಿಸುತ್ತಿದ್ದಾರೆ,” ಎಂದನು. ಅದಕ್ಕವನು, “ಯೆಹೋವ ದೇವರ ಜೀವದಾಣೆ, ನನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವುದಿಲ್ಲ,” ಎಂದನು. ಹಾಗೆಯೇ ಅವರಿಬ್ಬರೂ ಮುಂದಕ್ಕೆ ನಡೆದರು.