2 Kings 2:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರನ್ನು ಹಿಂಬಾಲಿಸಿಕೊಂಡು ಬಂದ ಪ್ರವಾದಿಗಳ ಗುಂಪಿನಲ್ಲಿ ಐವತ್ತು ಮಂದಿ ಅಲ್ಲಿದ್ದರು. ಎಲೀಯ ಮತ್ತು ಎಲೀಷರು ಜೋರ್ಡನ್ ನದಿಯ ಹತ್ತಿರ ನಿಂತುಕೊಂಡರು. ಆ ಐವತ್ತು ಮಂದಿ ಜನರು ಎಲೀಯ ಮತ್ತು ಎಲೀಷರಿಗಿಂತ ಬಹುದೂರದಲ್ಲಿ ನಿಂತುಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರವಾದಿ ಮಂಡಳಿಯವರಲ್ಲಿ ಐವತ್ತು ಜನರು ಇವರ ಹಿಂದಿನಿಂದಲೇ ಬಂದು ಯೊರ್ದನಿಗೆ ಸ್ವಲ್ಪ ದೂರದಲ್ಲಿಯೇ ನಿಂತುಕೊಂಡರು.
Kannada BSI Bible 2016
ಪ್ರವಾದಿಗಳ ಮಕ್ಕಳಲ್ಲಿ ಐವತ್ತು ಮಂದಿ ಹೋಗಿ ದೂರದಲ್ಲಿ ಎದುರಾಗಿ ನಿಂತರು. ಆದರೆ ಆ ಇಬ್ಬರು ಯೊರ್ದನಿನ ಬಳಿಯಲ್ಲಿ ನಿಂತರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರವಾದಿ ಮಂಡಲಿಯವರಲ್ಲಿ ಐವತ್ತು ಜನರು ಇವರ ಹಿಂದಿನಿಂದಲೇ ಬಂದು ಸ್ವಲ್ಪ ದೂರದಲ್ಲಿ ನಿಂತುಕೊಂಡರು.
Kannada Bible (KNCL) BSI 2016
ಪ್ರವಾದಿಮಂಡಲಿಯವರಲ್ಲಿ ಐವತ್ತುಮಂದಿ ಇವರ ಹಿಂದಿನಿಂದಲೇ ಬಂದು ಸ್ವಲ್ಪ ದೂರದಲ್ಲಿ ನಿಂತುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರವಾದಿಗಳ ಗುಂಪಿನಲ್ಲಿ ಐವತ್ತು ಮಂದಿ ಹೋಗಿ ದೂರದಲ್ಲಿ ಎದುರಾಗಿ ನಿಂತರು. ಆದರೆ ಆ ಇಬ್ಬರು ಯೊರ್ದನ್ ನದಿ ಬಳಿಯಲ್ಲಿ ನಿಂತರು.