2 Kings 2:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಲೀಯನು ತನ್ನ ಮೇಲಂಗಿಯನ್ನು ತೆಗೆದು ಅದರಿಂದ ನೀರನ್ನು ಹೊಡೆದನು. ಆಗ ನೀರು ಎರಡು ಭಾಗವಾಗಿ ಬಲಗಡೆಯಲ್ಲಿಯೂ ಎಡಗಡೆಯಲ್ಲಿಯೂ ನಿಂತುಕೊಂಡಿತು. ನಂತರ ಎಲೀಯ ಮತ್ತು ಎಲೀಷರು ಒಣನೆಲದ ಮೇಲೆ ನದಿಯನ್ನು ದಾಟಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಎಲೀಯನು ತನ್ನ ಕಂಬಳಿಯನ್ನು ಮಡಚಿ ಅದರಿಂದ ನೀರನ್ನು ಹೊಡೆಯಲು ನೀರು ಎರಡು ಭಾಗವಾಯಿತು. ಇಬ್ಬರೂ ಒಣನೆಲದ ಮೇಲೆ ನಡೆದುಕೊಂಡು ಯೊರ್ದನನ್ನು ದಾಟಿದರು.
Kannada BSI Bible 2016
ಎಲೀಯನು ತನ್ನ ಹೊದಿಕೆಯನ್ನು ತೆಗೆದು ಮಡಚಿಕೊಂಡು ನೀರನ್ನು ಹೊಡೆದನು. ಆಗ ಆ ನೀರು ವಿಭಾಗವಾದದರಿಂದ ಅವರಿಬ್ಬರೂ ಒಣ ಭೂಮಿಯ ಮೇಲೆ ದಾಟಿಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಎಲೀಯನು ತನ್ನ ಕಂಬಳಿಯನ್ನು ಮಡಚಿ ಅದರಿಂದ ನೀರನ್ನು ಹೊಡೆಯಲು ನೀರು ಎರಡು ಭಾಗವಾಯಿತು; ಇಬ್ಬರೂ ಒಣನೆಲದ ಮೇಲೆ ದಾಟಿ ಹೋದರು.
Kannada Bible (KNCL) BSI 2016
ಅನಂತರ ಎಲೀಯನು ತನ್ನ ಕಂಬಳಿಯನ್ನು ಮಡಿಚಿ, ಅದರಿಂದ ನೀರನ್ನು ಹೊಡೆದನು. ನೀರು ಇಬ್ಭಾಗವಾಯಿತು; ಅವರಿಬ್ಬರೂ ಒಣ ನೆಲದ ಮೇಲೆ ದಾಟಿಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಎಲೀಯನು ತನ್ನ ಹೊದಿಕೆಯನ್ನು ತೆಗೆದು ಮಡಿಸಿಕೊಂಡು, ನೀರನ್ನು ಹೊಡೆದನು. ಆಗ ಆ ನೀರು ಈ ಕಡೆ, ಆ ಕಡೆ ವಿಭಾಗವಾದುದರಿಂದ ಅವರಿಬ್ಬರೂ ಒಣಭೂಮಿಯ ಮೇಲೆ ದಾಟಿಹೋದರು.