2 Kings 2:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ನದಿಯನ್ನು ದಾಟಿದ ಮೇಲೆ ಎಲೀಯನು ಎಲೀಷನಿಗೆ, “ದೇವರು ನನ್ನನ್ನು ನಿನ್ನಿಂದ ತೆಗೆದುಕೊಳ್ಳುವುದಕ್ಕೆ ಮುಂಚೆ, ನಾನು ನಿನಗೆ ಏನು ಮಾಡಬೇಕೆಂದು ನೀನು ಅಪೇಕ್ಷಿಸುವೆ?” ಎಂದು ಕೇಳಿದನು. ಎಲೀಷನು, “ನಿನ್ನ ಆತ್ಮವು ನನ್ನ ಮೇಲೆ ಎರಡರಷ್ಟಿರಬೇಕೆಂದು ನಾನು ನಿನ್ನಲ್ಲಿ ಬೇಡುತ್ತೇನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಆಚೆ ದಡಕ್ಕೆ ಸೇರಿದ ಮೇಲೆ ಎಲೀಯನು ಎಲೀಷನನ್ನು, “ನಿನ್ನನ್ನು ಬಿಟ್ಟು ಹೋಗುವ ಮೊದಲು, ನಾನು ನಿನಗೋಸ್ಕರ ಏನು ಮಾಡಬೇಕೆನ್ನುತ್ತೀ ಹೇಳು” ಎಂದು ಕೇಳಿದನು. ಅದಕ್ಕೆ ಎಲೀಷನು, “ನಿನಗಿರುವ ಆತ್ಮದಲ್ಲಿ ನನಗೆ ಎರಡರಷ್ಟು ಪಾಲನ್ನು ಅನುಗ್ರಹಿಸು” ಎಂದು ಬೇಡಿಕೊಂಡನು.
Kannada BSI Bible 2016
ಅವರು ದಾಟಿಹೋದ ತರುವಾಯ ಆದದ್ದೇ ನಂದರೆ, ಎಲೀಯನು ಎಲೀಷನಿಗೆ--ನಾನು ನಿನ್ನ ಬಳಿ ಯಿಂದ ತಕ್ಕೊಳ್ಳಲ್ಪಡುವದಕ್ಕಿಂತ ಮುಂಚೆ ನಿನಗೋಸ್ಕರ ನಾನು ಮಾಡಬೇಕಾದದ್ದನ್ನು ಕೇಳು ಅಂದನು. ಅದಕ್ಕೆ ಎಲೀಷನು ದಯಮಾಡಿ ನಿನಗಿರುವ ಆತ್ಮದಲ್ಲಿ ನನಗೆ ಎರಡು ಪಾಲನ್ನು ಅನುಗ್ರಹಿಸು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಆಚೇದಡಕ್ಕೆ ಸೇರಿದ ಮೇಲೆ ಎಲೀಯನು ಎಲೀಷನನ್ನು - ನಿನ್ನನ್ನು ಬಿಟ್ಟುಹೋಗುವ ಮೊದಲು ನಾನು ನಿನಗೋಸ್ಕರ ಏನು ಮಾಡಬೇಕನ್ನುತ್ತೀ ಹೇಳು ಎಂದು ಕೇಳಿದನು. ಅದಕ್ಕೆ ಎಲೀಷನು - ನಿನಗಿರುವ ಆತ್ಮದಲ್ಲಿ ನನಗೆ ಎರಡು ಪಾಲನ್ನು ಅನುಗ್ರಹಿಸು ಎಂದು ಬೇಡಿಕೊಂಡನು.
Kannada Bible (KNCL) BSI 2016
ಅವರು ಆಚೆ ದಡಕ್ಕೆ ಸೇರಿದ ಮೇಲೆ ಎಲೀಯನು ಎಲೀಷನನ್ನು, “ನಿನ್ನನ್ನು ಬಿಟ್ಟುಹೋಗುವ ಮೊದಲು ನಾನು ನಿನಗೋಸ್ಕರ ಏನು ಮಾಡಬೇಕನ್ನುತ್ತಿ ಹೇಳು?” ಎಂದು ಕೇಳಿದನು. ಅದಕ್ಕೆ ಎಲೀಷನು, “ನಿಮಗಿರುವ ಆತ್ಮಶಕ್ತಿಯಲ್ಲಿ ನನಗೆ ಎರಡು ಪಾಲನ್ನು ಅನುಗ್ರಹಿಸಿ,” ಎಂದು ಬೇಡಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ದಾಟಿಹೋದ ತರುವಾಯ, ಎಲೀಯನು ಎಲೀಷನಿಗೆ, “ನಾನು ನಿನ್ನನ್ನು ಬಿಟ್ಟುಹೋಗುವುದಕ್ಕೆ ಮುಂಚೆ, ನಿನಗೋಸ್ಕರ ನಾನು ಮಾಡಬೇಕಾದದ್ದನ್ನು ಕೇಳು,” ಎಂದನು. ಅದಕ್ಕೆ ಎಲೀಷನು, “ನಿನ್ನ ಆತ್ಮದ ಎರಡು ಪಾಲನ್ನು ನಾನು ಬಾಧ್ಯವಾಗಿ ಹೊಂದುವಂತೆ ಮಾಡು,” ಎಂದನು.