2 Kings 20:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯೆಶಾಯನು ಯೆಹೋವನಲ್ಲಿ ಪ್ರಾರ್ಥಿಸಿದನು. ಯೆಹೋವನು ಈಗಾಗಲೇ ಹತ್ತು ಮೆಟ್ಟಲು ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಟಲು ಹಿಂದಕ್ಕೆ ಬರುವಂತೆ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಪ್ರವಾದಿಯಾದ ಯೆಶಾಯನು ಯೆಹೋವನಿಗೆ ಮೊರೆಯಿಡಲು ಆತನು ಆಹಾಜನ ಗಡಿಯಾರದ ವೇಳಾನುಸಾರ ಹತ್ತು ಮೆಟ್ಟಲು ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಟಲು ಹಿಂದೆ ಬರುವಂತೆ ಮಾಡಿದನು.
Kannada BSI Bible 2016
ಆಗ ಪ್ರವಾದಿಯಾದ ಯೆಶಾಯನು ಕರ್ತನಿಗೆ ಮೊರೆಯಿಟ್ಟದ್ದರಿಂದ ಅವನು ಆಹಾಜನ ಛಾಯಾಸ್ತಂಭದಲ್ಲಿ ಇಳಿದುಹೋದ ನೆರ ಳನ್ನು ಹತ್ತು ಮೆಟ್ಟಲು ಹಿಂದಕ್ಕೆ ಬರಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಪ್ರವಾದಿಯಾದ ಯೆಶಾಯನು ಯೆಹೋವನಿಗೆ ಮೊರೆಯಿಡಲು ಆತನು ಆಹಾಜನ ಸೋಪಾನಪಂಕ್ತಿಯಲ್ಲಿ ಹತ್ತು ಮೆಟ್ಲು ಮುಂದೆ ಹೋಗಿದ್ದ ನೆರಳನ್ನು ಹಿಂದೆ ಬರಮಾಡಿದನು.
Kannada Bible (KNCL) BSI 2016
ಆಗ ಪ್ರವಾದಿ ಯೆಶಾಯನು ಸರ್ವೇಶ್ವರನಿಗೆ ಮೊರೆಯಿಡಲು ಅವರು ಆಹಾಜನ ಸೋಪಾನಪಂಕ್ತಿಯಲ್ಲಿ ಹತ್ತು ಮೆಟ್ಟಲು ಮುಂದೆ ಹೋಗಿದ್ದ ನೆರಳನ್ನು ಹಿಂದೆ ಬರಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಪ್ರವಾದಿಯಾದ ಯೆಶಾಯನು ಯೆಹೋವ ದೇವರಿಗೆ ಮೊರೆಯಿಟ್ಟದ್ದರಿಂದ, ದೇವರು ಆಹಾಜನ ಮೆಟ್ಟಲುಗಳಲ್ಲಿ ಇಳಿದು ಹೋದ ನೆರಳನ್ನು ಹತ್ತು ಮೆಟ್ಟಲು ಹಿಂದಕ್ಕೆ ಬರಮಾಡಿದರು.