2 Kings 20:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸಮಯದಲ್ಲಿ, ಬಲದಾನನ ಮಗನಾದ ಬೆರೋದಕ ಬಲದಾನ ಎಂಬುವನು ಬಾಬಿಲೋನಿನ ರಾಜನಾಗಿದ್ದನು. ಅವನು ಹಿಜ್ಕೀಯನಿಗೆ ಪತ್ರಗಳನ್ನು ಮತ್ತು ಕಾಣಿಕೆಯನ್ನು ಕಳುಹಿಸಿದನು. ಹಿಜ್ಕೀಯನು ಅಸ್ವಸ್ಥನಾಗಿದ್ದಾನೆ ಎಂಬುದನ್ನು ಬೆರೋದಕ ಬಲದಾನನು ತಿಳಿದುಕೊಂಡದ್ದರಿಂದ ಹೀಗೆ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದೇ ಕಾಲದಲ್ಲಿ ಬಲದಾನನ ಮಗನೂ, ಬಾಬೆಲಿನ ಅರಸನೂ ಆದ ಬೆರೋದಕಬಲದಾನ ಎಂಬುವವನು ಹಿಜ್ಕೀಯನು ಅಸ್ವಸ್ಥನಾಗಿದ್ದಾನೆಂದು ಕೇಳಿ, ದೂತರ ಮುಖಾಂತರವಾಗಿ ಅವನಿಗೆ ಪತ್ರವನ್ನೂ, ಬಹುಮಾನವನ್ನೂ ಕಳುಹಿಸಿದನು.
Kannada BSI Bible 2016
ಅದೇ ಕಾಲದಲ್ಲಿ ಬಾಬೆಲಿನ ಅರಸನಾದ ಬಲ ದಾನನ ಮಗನಾದ ಬೆರೋದಕಬಲದಾನನು, ಹಿಜ್ಕೀ ಯನು ರೋಗದಲ್ಲಿದ್ದು ಸ್ವಸ್ಥನಾದನೆಂದು ಕೇಳಿದ್ದರಿಂದ ಪತ್ರಗಳನ್ನೂ ಕಾಣಿಕೆಯನ್ನೂ ಹಿಜ್ಕೀಯನ ಬಳಿಗೆ ಕಳುಹಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದೇ ಕಾಲದಲ್ಲಿ ಬಲದಾನನ ಮಗನೂ ಬಾಬೆಲಿನ ಅರಸನೂ ಆದ ಬೆರೋದಕಬಲದಾನನೆಂಬವನು ಹಿಜ್ಕೀಯನು ಅಸ್ವಸ್ಥನಾಗಿದ್ದನೆಂದು ಕೇಳಿ ದೂತರ ಮುಖಾಂತರವಾಗಿ ಅವನಿಗೆ ಪತ್ರವನ್ನೂ ಬಹುಮಾನವನ್ನೂ ಕಳುಹಿಸಿದನು.
Kannada Bible (KNCL) BSI 2016
ಅದೇ ಕಾಲದಲ್ಲಿ ಬಲದಾನನ ಮಗನೂ ಬಾಬಿಲೋನಿಯದ ಅರಸನೂ ಆದ ಬೆರೋದಕ ಬಲದಾನ ಎಂಬವನು ಹಿಜ್ಕೀಯನು ಅಸ್ವಸ್ಥನಾಗಿದ್ದನೆಂದು ಕೇಳಿ ದೂತರ ಮುಖಾಂತರ ಅವನಿಗೆ ಪತ್ರವನ್ನೂ ಉಡುಗೊರೆಯನ್ನೂ ಕಳುಹಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದೇ ಕಾಲದಲ್ಲಿ ಬಲದಾನನ ಮಗನೂ, ಬಾಬಿಲೋನಿನ ಅರಸನೂ ಆದ ಮೆರೋದಕ್ ಬಲದಾನ್ ಎಂಬವನು, ಹಿಜ್ಕೀಯನು ಅಸ್ವಸ್ಥನಾಗಿದ್ದಾನೆಂದು ಕೇಳಿದ್ದರಿಂದ ಪತ್ರಗಳನ್ನೂ, ಉಡುಗೊರೆಗಳನ್ನೂ ಹಿಜ್ಕೀಯನ ಬಳಿಗೆ ಕಳುಹಿಸಿದನು.