2 Kings 20:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹಿಜ್ಕೀಯನು ಬಾಬಿಲೋನಿನ ಜನರನ್ನು ಸ್ವಾಗತಿಸಿ, ಅವರಿಗೆ ತನ್ನ ಮನೆಯಲ್ಲಿದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ತೋರಿಸಿದನು. ಅವನು ತನ್ನ ಭಂಡಾರದಲ್ಲಿದ್ದ ಬೆಳ್ಳಿಬಂಗಾರಗಳನ್ನು, ಸುಗಂಧದ್ರವ್ಯಗಳನ್ನು, ಪರಿಮಳಭರಿತ ತೈಲವನ್ನು, ಆಯುಧಗಳನ್ನು ತೋರಿಸಿದನು. ಹಿಜ್ಕೀಯನ ಮನೆಯಲ್ಲಿ ಮತ್ತು ಅವನ ರಾಜ್ಯದಲ್ಲಿ ಅವರಿಗೆ ತೋರಿಸದೆ ಉಳಿದದ್ದು ಏನೂ ಇರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಿಜ್ಕೀಯನು ಬಂದಂಥ ದೂತರ ಮಾತನ್ನು ಕೇಳಿ, ಅವರಿಗೆ ಬೆಳ್ಳಿಬಂಗಾರ, ಸುಗಂಧದ್ರವ್ಯ, ಪರಿಮಳತೈಲ, ಮೊದಲಾದ ಪದಾರ್ಥಗಳಿರುವ ಮನೆಯನ್ನೂ, ಆಯುಧಶಾಲೆಯನ್ನೂ, ತನ್ನ ಭಂಡಾರದಲ್ಲಿದ್ದದೆಲ್ಲವನ್ನೂ ತೋರಿಸಿದನು. ಅವನ ಅರಮನೆಯಲ್ಲಿಯೂ, ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.
Kannada BSI Bible 2016
ಹಿಜ್ಕೀಯನು ಅವರ ಮಾತು ಕೇಳಿ ತನ್ನ ಎಲ್ಲಾ ಭಂಡಾರದ ಮನೆಯನ್ನೂ ಬೆಳ್ಳಿಯನ್ನೂ ಬಂಗಾರವನ್ನೂ ಸುಗಂಧಗಳನ್ನೂ ಒಳ್ಳೇ ತೈಲವನ್ನೂ ತನ್ನ ಆಯುಧ ಶಾಲೆಯನ್ನೂ ತನ್ನ ಬೊಕ್ಕಸಗಳಲ್ಲಿ ಸಿಕ್ಕಿದ್ದೆಲ್ಲವನ್ನೂ ಅವರಿಗೆ ತೋರಿಸಿದನು. ತನ್ನ ಮನೆ ಯಲ್ಲಿಯೂ ತನ್ನ ಎಲ್ಲಾ ರಾಜ್ಯದಲ್ಲಿಯೂ ಅವರಿಗೆ ತೋರಿಸದೆ ಇದ್ದದ್ದು ಒಂದಾದರೂ ಇರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಿಜ್ಕೀಯನು ಬಂದಂಥ ದೂತರ ಮಾತನ್ನು ಕೇಳಿ ಅವರಿಗೆ ಬೆಳ್ಳಿ ಬಂಗಾರ ಸುಗಂಧದ್ರವ್ಯ ಪರಿಮಳತೈಲ ಮೊದಲಾದ ಪದಾರ್ಥಗಳಿರುವ ಮನೆಯನ್ನೂ ಆಯುಧಶಾಲೆಯನ್ನೂ ತನ್ನ ಭಂಡಾರದಲ್ಲಿದ್ದದ್ದೆಲ್ಲವನ್ನೂ ತೋರಿಸಿದನು. ಅವನ ಅರಮನೆಯಲ್ಲಿಯೂ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.
Kannada Bible (KNCL) BSI 2016
ಹಿಜ್ಕೀಯನು ಬಂದಂಥ ದೂತರ ಮಾತನ್ನು ಕೇಳಿ, ಅವರಿಗೆ ಬೆಳ್ಳಿ, ಬಂಗಾರ, ಸುಗಂಧದ್ರವ್ಯ, ಪರಿಮಳತೈಲ, ಮೊದಲಾದ ಪದಾರ್ಥಗಳಿರುವ ಮನೆಯನ್ನೂ ಆಯುಧಶಾಲೆಯನ್ನೂ ತನ್ನ ಭಂಡಾರದಲ್ಲಿದ್ದದ್ದೆಲ್ಲವನ್ನೂ ತೋರಿಸಿದನು. ಅವನ ಅರಮನೆಯಲ್ಲೂ ರಾಜ್ಯದಲ್ಲೂ ಅವರಿಗೆ ತೋರಿಸದಿದ್ದ ವಸ್ತು ಒಂದೂ ಇರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಿಜ್ಕೀಯನು ಅವರ ಮಾತು ಕೇಳಿ ಅವರಿಗೆ ಬೆಳ್ಳಿ, ಬಂಗಾರ, ಸುಗಂಧದ್ರವ್ಯ, ಪರಿಮಳ ತೈಲ ಮೊದಲಾದ ಅಮೂಲ್ಯ ಪದಾರ್ಥಗಳಿರುವ ಮನೆಯನ್ನೂ, ಆಯುಧ ಶಾಲೆಯನ್ನೂ, ತನ್ನ ಭಂಡಾರದಲ್ಲಿ ಇರುವುದೆಲ್ಲವನ್ನೂ ತೋರಿಸಿದನು. ಹೀಗೆ ಹಿಜ್ಕೀಯನು ತನ್ನ ಅರಮನೆಯಲ್ಲಿಯೂ, ತನ್ನ ಸಮಸ್ತ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.