2 Kings 20:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ಪ್ರವಾದಿಯಾದ ಯೆಶಾಯನು ರಾಜನಾದ ಹಿಜ್ಕೀಯನ ಬಳಿಗೆ ಬಂದು, “ಈ ಜನರು ಹೇಳುವುದೇನು? ಇವರು ಎಲ್ಲಿಂದ ಬಂದರು?” ಎಂದು ಕೇಳಿದನು. ಹಿಜ್ಕೀಯನು, “ಅವರು ಬಹಳ ದೂರದೇಶದಿಂದ, ಬಾಬಿಲೋನಿನಿಂದ ಬಂದಿದ್ದಾರೆ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನನ್ನು, “ಆ ಮನುಷ್ಯರು ಎಲ್ಲಿಯವರು? ಏನು ಹೇಳಿದರು?” ಎಂದು ಕೇಳಲು ಅವನು, “ಅವರು ಬಹು ದೂರ ದೇಶವಾದ ಬಾಬೆಲಿನಿಂದ ಬಂದವರು” ಎಂದು ಉತ್ತರ ಕೊಟ್ಟನು.
Kannada BSI Bible 2016
ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ--ಆ ಮನುಷ್ಯರು ಏನು ಹೇಳಿದರು? ಅವರು ಎಲ್ಲಿಂದ ನಿನ್ನ ಬಳಿಗೆ ಬಂದರು ಅಂದನು. ಹಿಜ್ಕೀಯನು--ಅವರು ದೂರ ದೇಶದಿಂದ ಅಂದರೆ ಬಾಬೆಲಿನಿಂದ ನನ್ನ ಬಳಿಗೆ ಬಂದಿದ್ದಾರೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಪ್ರವಾದಿಯಾದ ಯೆಶಾಯನು ಹಿಜ್ಕೀಯನ ಬಳಿಗೆ ಬಂದು ಅವನನ್ನು - ಆ ಮನುಷ್ಯರು ಎಲ್ಲಿಯವರು, ಏನು ಹೇಳಿದರು ಎಂದು ಕೇಳಲು ಅವನು - ಅವರು ಬಹುದೂರ ದೇಶವಾದ ಬಾಬೆಲಿನಿಂದ ಬಂದವರು ಎಂದು ಉತ್ತರ ಕೊಟ್ಟನು.
Kannada Bible (KNCL) BSI 2016
ಆಗ ಪ್ರವಾದಿ ಯೆಶಾಯನು ಹಿಜ್ಕೀಯನ ಬಳಿಗೆ ಬಂದು, “ಆ ಮನುಷ್ಯರು ಎಲ್ಲಿಯವರು, ಏನು ಹೇಳಿದರು?” ಎಂದು ಕೇಳಿದನು. ಅದಕ್ಕೆ ಹಿಜ್ಕೀಯನು, “ಅವರು ಬಹುದೂರದ ದೇಶವಾದ ಬಾಬಿಲೋನಿನಿಂದ ಬಂದವರು,” ಎಂದು ಉತ್ತರಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ, “ಆ ಮನುಷ್ಯರು ಎಲ್ಲಿಂದ ಬಂದವರು ಮತ್ತು ಅವರು ನಿನಗೆ ಏನು ಹೇಳಿದರು?” ಎಂದು ಕೇಳಿದನು. ಹಿಜ್ಕೀಯನು, “ಅವರು ಬಹುದೂರ ದೇಶವಾದ ಬಾಬಿಲೋನಿನಿಂದ ಬಂದವರು,” ಎಂದು ಹೇಳಿದನು.