2 Kings 20:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಶಾಯನು, “ಅವರು ನಿನ್ನ ಮನೆಯಲ್ಲಿ ಏನನ್ನು ನೋಡಿದರು?” ಎಂದು ಕೇಳಿದನು. ಹಿಜ್ಕೀಯನು, “ಅವರು ನನ್ನ ಮನೆಯಲ್ಲಿರುವುದನ್ನೆಲ್ಲಾ ನೋಡಿದರು. ಅವರಿಗೆ ತೋರಿಸದೆ ಉಳಿದಿರುವುದು ನನ್ನ ಭಂಡಾರದಲ್ಲಿ ಏನೂ ಇಲ್ಲ” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಶಾಯನು ತಿರುಗಿ ಹಿಜ್ಕೀಯನನ್ನು, “ಅವರು ನಿನ್ನ ಮನೆಯಲ್ಲಿ ಏನು ನೋಡಿದರು?” ಎಂದು ಕೇಳಲು ಅವನು, “ಅರಮನೆಯಲ್ಲಿ ಇರುವುದೆಲ್ಲವನ್ನೂ ನೋಡಿದರು. ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದಿದ್ದ ಒಂದು ವಸ್ತುವು ಇರುವುದಿಲ್ಲ” ಎಂದನು.
Kannada BSI Bible 2016
ಅವನು--ನಿನ್ನ ಮನೆಯಲ್ಲಿ ಅವರು ಏನು ನೋಡಿದರು ಅಂದನು. ಹಿಜ್ಕೀಯನು--ನನ್ನ ಮನೆಯಲ್ಲಿ ಇದ್ದ ಎಲ್ಲವನ್ನೂ ಅವರು ನೋಡಿದ್ದಾರೆ; ನನ್ನ ಬೊಕ್ಕಸಗಳಲ್ಲಿ ನಾನು ಅವರಿಗೆ ತೋರಿಸದೆ ಇದ್ದದ್ದು ಒಂದಾದರೂ ಇಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಶಾಯನು ತಿರಿಗಿ ಅವನನ್ನು - ಅವರು ನಿನ್ನ ಅರಮನೆಯಲ್ಲಿ ಏನು ನೋಡಿದರು ಎಂದು ಕೇಳಲು ಅವನು - ಅರಮನೆಯಲ್ಲಿರುವದೆಲ್ಲವನ್ನೂ ನೋಡಿದರು. ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರುವದಿಲ್ಲ ಅಂದನು.
Kannada Bible (KNCL) BSI 2016
ಯೆಶಾಯನು ಮತ್ತೆ ಅವನನ್ನು, “ಅವರು ನಿನ್ನ ಅರಮನೆಯಲ್ಲಿ ಏನು ನೋಡಿದರು?” ಎಂದು ಕೇಳಲು ಹಿಜ್ಕೀಯನು, “ಅರಮನೆಯಲ್ಲಿರುವುದೆಲ್ಲವನ್ನೂ ನೋಡಿದರು. ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದಿದ್ದ ಒಡವೆ ವಸ್ತು ಒಂದೂ ಇಲ್ಲ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಯೆಶಾಯನು ಪುನಃ ಅವನನ್ನು, “ಅವರು ನಿನ್ನ ಅರಮನೆಯಲ್ಲಿ ಏನನ್ನು ನೋಡಿದರು?” ಎಂದು ಕೇಳಿದನು. ಹಿಜ್ಕೀಯನು, “ನನ್ನ ಅರಮನೆಯಲ್ಲಿ ಇರುವುದೆಲ್ಲವನ್ನು ಅವರು ನೋಡಿದರು, ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದೆ ಇದ್ದದ್ದು ಏನೂ ಇಲ್ಲ,” ಎಂದು ಉತ್ತರಕೊಟ್ಟನು.