2 Kings 20:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ಮನೆಯಲ್ಲಿರುವ ವಸ್ತುಗಳೆಲ್ಲವನ್ನು ನಿನ್ನ ಮನೆಯಿಂದ ಬಾಬಿಲೋನಿಗೆ ಕೊಂಡೊಯ್ಯುವ ಕಾಲವು ಬರುತ್ತಿದೆ; ನಿನ್ನ ಪೂರ್ವಿಕರು ಇಂದಿನವರೆಗೆ ರಕ್ಷಿಸಿದ ವಸ್ತುಗಳೆಲ್ಲವನ್ನು ಬಾಬಿಲೋನಿಗೆ ತೆಗೆದುಕೊಂಡುಹೋಗುವ ಸಮಯವು ಬರುತ್ತಿದೆ. ಏನನ್ನೂ ಬಿಡುವುದಿಲ್ಲ! ಯೆಹೋವನೇ ಇದನ್ನು ನುಡಿದಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ಆತನು ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವನ್ನು ಬಾಬಿಲೋನಿಗೆ ಒಯ್ಯಲ್ಪಡುವ ದಿನವು ಬರುವುದು, ಇಲ್ಲಿ ಏನೂ ಉಳಿಯುವುದಿಲ್ಲ ಎಂದು ಯೆಹೋವನು ಹೇಳುತ್ತಾನೆ.
Kannada BSI Bible 2016
ಇಗೋ, ದಿನಗಳು ಬರುವವು; ಆಗ ನಿನ್ನ ಮನೆಯಲ್ಲಿ ಇರುವದೆಲ್ಲವೂ ನಿನ್ನ ತಂದೆಗಳು ಇಂದಿನ ವರೆಗೂ ಸಂಪಾದಿಸಿ ಇಟ್ಟದ್ದದ್ದೆಲ್ಲವೂ ಬಾಬೆಲಿಗೆ ಒಯ್ಯ ಲ್ಪಡುವದು. ಒಂದೂ ಉಳಿಯುವದಿಲ್ಲವೆಂದು ಕರ್ತನು ಹೇಳುತ್ತಾನೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವೂ ಬಾಬೆಲಿಗೆ ಒಯ್ಯಲ್ಪಡುವ ದಿನ ಬರುವದು; ಇಲ್ಲೇನೂ ಉಳಿಯುವದಿಲ್ಲ.
Kannada Bible (KNCL) BSI 2016
‘ನಿನ್ನ ಪೂರ್ವಜರ ಕಾಲದಿಂದ ಇಂದಿನವರೆಗೆ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವನ್ನು ಬಾಬಿಲೋನಿಯಾಕ್ಕೆ ಕೊಂಡೊಯ್ಯುವ ದಿನ ಬರುವುದು; ಇಲ್ಲೇನೂ ಉಳಿಯುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಗೋ, ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ನಿನ್ನ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವೂ ಬಾಬಿಲೋನಿಗೆ ಕೊಂಡೊಯ್ಯುವ ದಿವಸ ಬರುವುದು. ಇಲ್ಲಿ ಏನೂ ಉಳಿಯುವುದಿಲ್ಲ.