2 Kings 20:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ನಿನ್ನ ಜೀವಕ್ಕೆ ಹದಿನೈದು ವರ್ಷಗಳನ್ನು ಕೂಡಿಸುತ್ತೇನೆ. ನಾನು ನಿನ್ನನ್ನು ಮತ್ತು ಈ ನಗರವನ್ನು ಅಶ್ಶೂರದ ರಾಜನ ಅಧಿಕಾರದಿಂದ ರಕ್ಷಿಸುತ್ತೇನೆ. ನಾನು ಈ ನಗರವನ್ನು ಸಂರಕ್ಷಿಸುತ್ತೇನೆ. ನಾನು ನನ್ನ ಸೇವಕನಾದ ದಾವೀದನಿಗೆ ವಾಗ್ದಾನ ಮಾಡಿದ್ದಕ್ಕಾಗಿಯೂ ನನಗಾಗಿಯೂ ಇದನ್ನು ಮಾಡುತ್ತೇನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ, ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಹೆಚ್ಚಿಸಿದ್ದೇನೆ, ನಿನ್ನನ್ನೂ, ಈ ಪಟ್ಟಣವನ್ನೂ ಅಶ್ಶೂರನ ಅರಸನ ಕೈಗೆ ಬೀಳದಂತೆ ತಪ್ಪಿಸುವೆನು. ನನಗಾಗಿಯೂ, ನನ್ನ ಸೇವಕನಾದ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು’ ಎಂಬುದಾಗಿ ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನು ಹೇಳುತ್ತಾನೆ ಎಂದು ತಿಳಿಸು” ಅಂದನು.
Kannada BSI Bible 2016
ಇದಲ್ಲದೆ ನಾನು ನಿನ್ನ ಆಯುಷ್ಯಕ್ಕೆ ಹದಿನೈದು ವರುಷ ಹೆಚ್ಚಾಗಿ ಕೂಡಿ ಸುತ್ತೇನೆ; ನಿನ್ನನ್ನೂ ಈ ಪಟ್ಟಣವನ್ನೂ ಅಶ್ಶೂರಿನ ಅರಸನ ಕೈಗೆ ಬೀಳದಂತೆ ತಪ್ಪಿಸಿಬಿಡುವೆನು. ಈ ಪಟ್ಟಣವನ್ನು ನನ್ನ ನಿಮಿತ್ತವಾಗಿಯೂ ನನ್ನ ಸೇವಕನಾದ ದಾವೀದನ ನಿಮಿತ್ತವಾಗಿಯೂ ಕಾಪಾಡುವೆನೆಂದು ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೇಳು ತ್ತಾನೆ ಎಂಬದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ನಿನ್ನ ಆಯುಷ್ಯಕ್ಕೆ ಹದಿನೈದು ವರುಷಗಳನ್ನು ಕೂಡಿಸುತ್ತೇನೆ. ನಿನ್ನನ್ನೂ ಈ ಪಟ್ಟಣವನ್ನೂ ಅಶ್ಶೂರದ ಅರಸನ ಕೈಗೆ ಬೀಳದಂತೆ ತಪ್ಪಿಸುವೆನು; ನನಗೋಸ್ಕರವಾಗಿಯೂ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು ಎಂಬದಾಗಿ ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನು ಹೇಳುತ್ತಾನೆ ಎಂದು ತಿಳಿಸು ಎಂದು ಆಜ್ಞಾಪಿಸಿದನು.
Kannada Bible (KNCL) BSI 2016
ಅದಲ್ಲದೆ ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಕೂಡಿಸುತ್ತೇನೆ. ನಿನ್ನನ್ನೂ ಈ ಪಟ್ಟಣವನ್ನೂ ಅಸ್ಸೀರಿಯದ ಅರಸನ ಕೈಗೆ ಬೀಳದಂತೆ ತಪ್ಪಿಸುವೆನು. ನನಗಾಗಿ ಹಾಗು ನನ್ನ ದಾಸ ದಾವೀದನಿಗಾಗಿ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು’ ಎಂಬುದಾಗಿ ನಿನ್ನ ಪೂರ್ವಜ ದಾವೀದನ ದೇವರಾಗಿರುವ ಸರ್ವೇಶ್ವರ ಹೇಳುತ್ತಾರೆ ಎಂದು ತಿಳಿಸು,” ಎಂದು ಆಜ್ಞಾಪಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ನಾನು ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಹೆಚ್ಚಾಗಿ ಕೂಡಿಸುತ್ತೇನೆ. ನಿನ್ನನ್ನೂ, ಈ ಪಟ್ಟಣವನ್ನೂ ಅಸ್ಸೀರಿಯದ ಅರಸನ ಕೈಯಿಂದ ಬಿಡಿಸುವೆನು. ಈ ಪಟ್ಟಣವನ್ನು ನನ್ನ ನಿಮಿತ್ತವಾಗಿಯೂ, ನನ್ನ ಸೇವಕನಾದ ದಾವೀದನ ನಿಮಿತ್ತವಾಗಿಯೂ ಕಾಪಾಡುವೆನು,’ ಎಂದು ಹೇಳು,” ಎಂದರು.