2 Kings 20:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯೆಶಾಯನು, “ಅಂಜೂರದ ಹಣ್ಣಿನಿಂದ ಒಂದು ಉಂಡೆಯನ್ನು ಮಾಡಿಸಿ ಅದನ್ನು ಕುರುವಿನ ಮೇಲೆ ಇಡು” ಎಂದು ಹೇಳಿದನು. ಅಂತೆಯೇ ಅವರು ಅಂಜೂರಹಣ್ಣಿನ ಒಂದು ಉಂಡೆಯನ್ನು ಹಿಜ್ಕೀಯನ ಕುರುವಿನ ಮೇಲೆ ಇಟ್ಟರು. ಆಗ ಹಿಜ್ಕೀಯನಿಗೆ ಗುಣವಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಯೆಶಾಯನು, ಒಂದು ಅಂಜೂರಹಣ್ಣನ್ನು ತೆಗೆದು ಅವನ ಗಾಯದ ಮೇಲೆ ಇಟ್ಟಾಗ ಹಿಜ್ಕೀಯನು ಗುಣಹೊಂದಿದನು.
Kannada BSI Bible 2016
ಇದಲ್ಲದೆ ಯೆಶಾಯನು ಅಂಜೂರದ ಹಣ್ಣುಗಳ ಉಂಡೆಯನ್ನು ತಕ್ಕೊಂಡು ಬರ ಹೇಳಿದನು. ಅವರು ಹಾಗೆಯೇ ತಕ್ಕೊಂಡು ಹುಣ್ಣಿನ ಮೇಲೆ ಹಾಕಿದ್ದರಿಂದ ಅವನು ಗುಣ ಹೊಂದಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಶಾಯನು ಒಂದು ಅಂಜೂರಹಣ್ಣಿನ ಉಂಡೆಯನ್ನು ತರಿಸಿ ಅದನ್ನು ಕುರುವಿನ ಮೇಲೆ ಇಡಿಸಿದಾಗ ಹಿಜ್ಕೀಯನು ಗುಣಹೊಂದಿದನು.
Kannada Bible (KNCL) BSI 2016
ಯೆಶಾಯನು ಒಂದು ಅಂಜೂರದ ಹಣ್ಣಿನ ಉಂಡೆಯನ್ನು ತರಿಸಿ ಅದನ್ನು ಕುರುವಿನ ಮೇಲೆ ಇಡಿಸಿದಾಗ ಹಿಜ್ಕೀಯನು ಗುಣಹೊಂದಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಶಾಯನು ಅಂಜೂರದ ಹಣ್ಣುಗಳ ಉಂಡೆಯನ್ನು ತೆಗೆದುಕೊಂಡು ಬರಲು ಹೇಳಿದ್ದನು. ಅವರು ಹಾಗೆಯೇ ತೆಗೆದುಕೊಂಡು ಬಂದು ಹುಣ್ಣಿನ ಮೇಲೆ ಹಾಕಿದ್ದರಿಂದ ಅವನು ಗುಣಹೊಂದಿದನು.