2 Kings 20:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹಿಜ್ಕೀಯನು ಯೆಶಾಯನಿಗೆ, “ಯೆಹೋವನು ನನ್ನನ್ನು ಗುಣಪಡಿಸುತ್ತಾನೆಂಬುದಕ್ಕೆ ಮತ್ತು ಮೂರನೆಯ ದಿನ ನಾನು ದೇವಾಲಯದವರೆಗೆ ಹೋಗುವೆನೆಂಬುದಕ್ಕೆ ಏನು ಗುರುತು?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಿಜ್ಕೀಯನು ಯೆಶಾಯನಿಗೆ, “ಯೆಹೋವನು ನನ್ನನ್ನು ಗುಣಪಡಿಸುವನೆಂಬುವುದಕ್ಕೂ, ನಾನು ಮೂರನೆಯ ದಿನ ಆತನ ಆಲಯಕ್ಕೆ ಹೋಗುವೆನೆಂಬುವುದಕ್ಕೂ, ಇರುವ ಗುರುತು ಏನು?” ಎಂದು ಕೇಳಿದನು.
Kannada BSI Bible 2016
ಆದರೆ ಹಿಜ್ಕೀಯನು ಯೆಶಾಯನಿಗೆ--ಕರ್ತನು ನನ್ನನ್ನು ಸ್ವಸ್ಥ ಮಾಡುವನೆಂಬದಕ್ಕೂ ನಾನು ಮೂರನೇ ದಿವಸದಲ್ಲಿ ಕರ್ತನ ಮನೆಗೆ ಹೋಗುವೆನೆಂಬದಕ್ಕೂ ನನಗೆ ಗುರುತೇನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಿಜ್ಕೀಯನು ಯೆಶಾಯನನ್ನು - ಯೆಹೋವನು ನನ್ನನ್ನು ಗುಣಪಡಿಸುವನೆಂಬದಕ್ಕೂ ನಾನು ನಾಡದು ಆತನ ಆಲಯಕ್ಕೆ ಹೋಗುವೆನೆಂಬದಕ್ಕೂ ಗುರುತೇನು ಎಂದು ಕೇಳಿದ್ದಕ್ಕೆ ಅವನು -
Kannada Bible (KNCL) BSI 2016
ಹಿಜ್ಕೀಯನು ಯೆಶಾಯನನ್ನು, “ಸರ್ವೇಶ್ವರ ನನ್ನನ್ನು ಗುಣಪಡಿಸುವರೆಂಬುದಕ್ಕೂ ನಾನು ಮೂರನೆ ದಿನ ಅವರ ಆಲಯಕ್ಕೆ ಹೋಗುವೆನೆಂಬುದಕ್ಕೂ ಗುರುತೇನು?” ಎಂದು ಕೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಿಜ್ಕೀಯನು ಯೆಶಾಯನಿಗೆ, “ಯೆಹೋವ ದೇವರು ನನ್ನನ್ನು ಸ್ವಸ್ಥಮಾಡುವರೆಂಬುದಕ್ಕೆ ಮತ್ತು ನಾನು ಮೂರನೆಯ ದಿವಸದಲ್ಲಿ ಯೆಹೋವ ದೇವರ ಆಲಯಕ್ಕೆ ಹೋಗುವೆನೆಂಬುದಕ್ಕೆ ನನಗೆ ಗುರುತೇನು?” ಎಂದು ಕೇಳಿದನು.