2 Kings 20:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಶಾಯನು, “ನೆರಳು ಹತ್ತು ಮೆಟ್ಟಲು ಮುಂದಕ್ಕೆ ಹೋಗಬೇಕೋ ಅಥವಾ ಹತ್ತು ಮೆಟ್ಟಲು ಹಿಂದಕ್ಕೆ ಹೋಗಬೇಕೋ? ನಿನಗೆ ಯಾವುದು ಬೇಕಾಗಿದೆ? ಯೆಹೋವನು ತಾನು ಹೇಳಿದ್ದನ್ನು ಮಾಡುತ್ತಾನೆಂಬುದಕ್ಕೆ ಇದೇ ನಿನಗೆ ಗುರುತು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಯೆಶಾಯನು, “ಯೆಹೋವನು ನುಡಿದಿದ್ದನ್ನು ನೆರವೇರಿಸುವನು ಎಂಬುದಕ್ಕೆ ಯೆಹೋವನಿಂದ ಉಂಟಾದ ಗುರುತು ಕೇಳುತ್ತಿರುವೆ, ಹಾಗಾದರೆ ನೆರಳು ಹತ್ತು ಮೆಟ್ಟಲು ಮುಂದೆ ಹೋಗಬೇಕೋ? ಹಿಂದೆ ಬರಬೇಕೋ? ಹೇಳು ಹಿಂದೆ ಹೋಗಬೇಕೋ ಹೇಳು?” ಎಂದು ಕೇಳಿದನು.
Kannada BSI Bible 2016
ಆಗ ಯೆಶಾಯನು --ಕರ್ತನು, ತಾನು ಹೇಳಿದ ಕಾರ್ಯವನ್ನು ಮಾಡುವ ನೆಂಬದಕ್ಕೆ ಕರ್ತನ ಕಡೆಯಿಂದ ನಿನಗೆ ಉಂಟಾಗುವ ಗುರುತು ಇದೇ--ನೆರಳು ಹತ್ತು ಮೆಟ್ಟಲು ಮುಂದಕ್ಕೆ ಹೋಗಬೇಕೋ? ಇಲ್ಲವೆ ಹತ್ತು ಮೆಟ್ಟಲು ಹಿಂದಕ್ಕೆ ಹೋಗಬೇಕೋ ಎಂದು ಕೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ನುಡಿದದ್ದನ್ನು ನೆರವೇರಿಸುವನು ಎಂಬದಕ್ಕೆ ಯೆಹೋವನಿಂದ ಗುರುತು ಕೇಳುತ್ತೀ; ಹಾಗಾದರೆ ನೆರಳು ಹತ್ತು ಮೆಟ್ಲು ಮುಂದೆ ಹೋಗಬೇಕೋ ಹಿಂದೆ ಬರಬೇಕೋ ಹೇಳು ಅಂದನು.
Kannada Bible (KNCL) BSI 2016
ಅವನು, “ಸರ್ವೇಶ್ವರ ನುಡಿದದ್ದನ್ನು ನೆರವೇರಿಸುವರು ಎಂಬುದಕ್ಕೆ ಸರ್ವೇಶ್ವರನಿಂದ ಗುರುತು ಕೇಳುತ್ತಿರುವೆ; ಹಾಗಾದರೆ ನೆರಳು ಹತ್ತು ಮೆಟ್ಟಲು ಮುಂದೆ ಹೋಗಬೇಕೋ ಹಿಂದೆ ಬರಬೇಕೋ ಹೇಳು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಶಾಯನು, “ಯೆಹೋವ ದೇವರು, ತಾವು ಹೇಳಿದ ಕಾರ್ಯವನ್ನು ಮಾಡುವರೆಂಬುದಕ್ಕೆ ಯೆಹೋವ ದೇವರ ಕಡೆಯಿಂದ ನಿನಗೆ ಉಂಟಾಗುವ ಗುರುತು, ನೆರಳು ಹತ್ತು ಮೆಟ್ಟಲು ಮುಂದಕ್ಕೆ ಹೋಗಬೇಕೋ? ಇಲ್ಲವೆ ಹತ್ತು ಮೆಟ್ಟಲು ಹಿಂದಕ್ಕೆ ಬರಬೇಕೋ?” ಎಂದು ಕೇಳಿದನು.