2 Kings 21:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮನಸ್ಸೆಯು ಅನೇಕ ನಿರಪರಾಧಿಗಳನ್ನು ಕೊಂದುಹಾಕಿದನು; ಜೆರುಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೆ ರಕ್ತದಿಂದ ತುಂಬಿಸಿದನು. ಯೆಹೂದವನ್ನು ಪಾಪಕ್ಕೆ ಪ್ರೇರೇಪಿಸಿದ್ದರ ಜೊತೆಗೆ ಅವನ ಈ ಪಾಪಗಳು ಕೂಡಿಕೊಂಡವು. ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಯೆಹೂದವು ಮಾಡುವಂತೆ ಮನಸ್ಸೆಯು ಪ್ರೇರೇಪಿಸಿದನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನಸ್ಸೆಯು ಯೆಹೂದ್ಯರನ್ನು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಲು ಪ್ರೇರೇಪಿಸಿದ್ದಲ್ಲದೆ ಯೆರೂಸಲೇಮನ್ನೆಲ್ಲಾ ನಿರಪರಾಧಿಗಳ ರಕ್ತದಿಂದ ತುಂಬಿಸಿದನು.
Kannada BSI Bible 2016
ಇದಲ್ಲದೆ ಮನಸ್ಸೆಯು ಕರ್ತನ ದೃಷ್ಟಿಯಲ್ಲಿ ಕೇಡನ್ನು ಮಾಡಿದ್ದರಲ್ಲಿ ಯೆಹೂದವು ಪಾಪವನ್ನು ಮಾಡಲು ಪ್ರೇರೇಪಿಸಿದ ತನ್ನ ಪಾಪದ ಹೊರತು ಅವನು ಯೆರೂಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯ ವರೆಗೂ ತಾನು ಬಹು ಹೆಚ್ಚಾಗಿ ಚೆಲ್ಲಿದ ನಿರಾಪರಾಧದ ರಕ್ತದಿಂದ ತುಂಬಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮನಸ್ಸೆಯು ಯೆಹೂದ್ಯರನ್ನು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವದನ್ನು ಮಾಡ ಪ್ರೇರಿಸಿದ್ದಲ್ಲದೆ ಯೆರೂಸಲೇಮನ್ನೆಲ್ಲಾ ನಿರಪರಾಧ ರಕ್ತದಿಂದ ತುಂಬಿಸಿದನು.
Kannada Bible (KNCL) BSI 2016
ಮನಸ್ಸೆಯು ಯೆಹೂದ್ಯರನ್ನು ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ಮಾಡಲು ಪ್ರೇರಿಸಿದ್ದಲ್ಲದೆ, ನಿರಪರಾಧಿಗಳ ವಧೆಯಿಂದ ಜೆರುಸಲೇಮನ್ನೆಲ್ಲಾ ರಕ್ತಮಯವಾಗಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಮನಸ್ಸೆಯು ಯೆಹೋವ ದೇವರ ದೃಷ್ಟಿಯಲ್ಲಿ ಕೇಡನ್ನು ಮಾಡಿದ್ದರಲ್ಲಿ ಯೆಹೂದವು ಪಾಪವನ್ನು ಮಾಡಲು ಪ್ರೇರೇಪಿಸಿದ ತನ್ನ ಪಾಪದ ಹೊರತು ಅವನು ಯೆರೂಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ತಾನು ಬಹು ಹೆಚ್ಚಾಗಿ ಚೆಲ್ಲಿದ ನಿರಪರಾಧದ ರಕ್ತದಿಂದ ತುಂಬಿಸಿದನು.