2 Kings 21:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಮನಸ್ಸೆಯು ಮಾಡಿದ ಎಲ್ಲಾ ಕಾರ್ಯಗಳನ್ನೂ ಅವನು ಮಾಡಿದ ಪಾಪಕೃತ್ಯಗಳನ್ನೂ ಬರೆಯಲಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನಸ್ಸೆಯ ಉಳಿದ ಚರಿತ್ರೆಯೂ ಅವನ ಎಲ್ಲಾ ಕ್ರಿಯೆಗಳೂ, ಅವನು ಮಾಡಿದ ಪಾಪಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
Kannada BSI Bible 2016
ಮನಸ್ಸೆಯ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಅವನು ಮಾಡಿದ ಪಾಪವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಮನಸ್ಸೆಯ ಉಳಿದ ಚರಿತ್ರೆಯೂ ಅವನ ಎಲ್ಲಾ ಕ್ರಿಯೆಗಳೂ ಅವನು ಮಾಡಿದ ಪಾಪಕೃತ್ಯಗಳೂ ಯೆಹೂದರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
Kannada Bible (KNCL) BSI 2016
ಮನಸ್ಸೆಯ ಉಳಿದ ಚರಿತ್ರೆ ಅವನ ಕಾರ್ಯಕಲಾಪಗಳು ಹಾಗು ಅವನು ಮಾಡಿದ ಪಾಪಕೃತ್ಯಗಳು ಜುದೇಯ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮನಸ್ಸೆಯ ಇತರ ಕ್ರಿಯೆಗಳೂ, ಅವನು ಮಾಡಿದ ಸಮಸ್ತವೂ, ಅವನು ಮಾಡಿದ ಪಾಪವೂ ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.