2 Kings 21:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮನಸ್ಸೆಯು ಸತ್ತುಹೋದನು ಮತ್ತು ಅವನನ್ನು ಅವನ ಪೂರ್ವಿಕರ ಬಳಿ ಸಮಾಧಿಮಾಡಿದರು. ಮನಸ್ಸೆಯನ್ನು ಉಜ್ಜನ ವನದಲ್ಲಿ ಸಮಾಧಿಮಾಡಿದರು. ಈ ವನವು ಅವನ ಸ್ವಂತ ಮನೆಯಲ್ಲಿತ್ತು. ಮನಸ್ಸೆಯ ನಂತರ ಅವನ ಮಗನಾದ ಆಮೋನನು ಹೊಸ ರಾಜನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನಸ್ಸೆಯು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅವನ ಅರಮನೆಯಿರುವ ಉಜ್ಜನ ವನದಲ್ಲಿ ಸಮಾಧಿಮಾಡಿದರು. ಅವನಿಗೆ ನಂತರ ಅವನ ಮಗನಾದ ಆಮೋನನು ಅರಸನಾದನು.
Kannada BSI Bible 2016
ಮನಸ್ಸೆಯು ತನ್ನ ಪಿತೃಗಳ ಸಂಗಡ ನಿದ್ರಿಸಿದನು ಅವನನ್ನು ಅವನ ಮನೆಯ ತೋಟವಾದ ಉಜ್ಜನ ತೋಟದಲ್ಲಿ ಹೂಣಿ ಟ್ಟರು. ಅವನ ಮಗನಾದ ಆಮೋನನು ಅವನಿಗೆ ಬದಲಾಗಿ ಅರಸನಾದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಅವನ ಅರಮನೆಯಿರುವ ಉಜ್ಜನ ವನದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಮೋನನು ಅರಸನಾದನು.
Kannada Bible (KNCL) BSI 2016
ಅವನು ಸತ್ತು ಪಿತೃಗಳ ಬಳಿ ಸೇರಿದಾಗ ಅವನ ಶವವನ್ನು ಅವನ ಅರಮನೆಯಿರುವ ಉಜ್ಜನ ವನದಲ್ಲಿ ಸಮಾಧಿ ಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಆಮೋನನು ಅರಸನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮನಸ್ಸೆಯು ಮೃತನಾಗಿ ತನ್ನ ಪಿತೃಗಳ ಸಂಗಡ ಸೇರಿದನು, ಅವನ ಅರಮನೆಯ ತೋಟವಾದ ಉಜ್ಜನ ತೋಟದಲ್ಲಿ ಅವನ ಶವವನ್ನು ಸಮಾಧಿಮಾಡಿದರು. ಅವನ ಮಗ ಆಮೋನನು ಅವನಿಗೆ ಬದಲಾಗಿ ಅರಸನಾದನು.