2 Kings 21:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಮೋನನು ಆಳಲಾರಂಭಿಸಿದಾಗ ಅವನಿಗೆ ಇಪ್ಪತ್ತೆರಡು ವರ್ಷ ವಯಸ್ಸಾಗಿತ್ತು. ಅವನು ಎರಡು ವರ್ಷ ಜೆರುಸಲೇಮಿನಲ್ಲಿ ಆಳಿದನು. ಅವನ ತಾಯಿಯ ಹೆಸರು ಮೆಷುಲ್ಲೆಮೆತ್. ಅವಳು ಯೊಟ್ಟಾ ಊರಿನ ಹಾರೂಚನ ಮಗಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಮೋನನು ಅರಸನಾದಾಗ ಅವನು ಇಪ್ಪತ್ತೆರಡು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಎರಡು ವರ್ಷಗಳ ಕಾಲ ಆಳಿದನು. ಯೊಟ್ಬಾ ಊರಿನವಳೂ ಹಾರೂಚನ ಮಗಳೂ ಆದ ಮೆಷುಲ್ಲೆಮೆತ್ ಎಂಬಾಕೆಯು ಅವನ ತಾಯಿ.
Kannada BSI Bible 2016
ಆಮೋನನು ಆಳಲು ಆರಂಭಿಸಿದಾಗ ಇಪ್ಪತ್ತೆ ರಡು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಎರಡು ವರುಷ ಆಳಿದನು. ಅವನ ತಾಯಿಯೂ ಯೊಟ್ಬಾ ಊರಿನವನಾದ ಹಾರೂಚನ ಮಗಳಾದ ಮೆಷುಲ್ಲೆ ಮೆತ್‌ ಎಂಬ ಹೆಸರುಳ್ಳವಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೋನನು ಅರಸನಾದಾಗ ಇಪ್ಪತ್ತೆರಡು ವರುಷದವನಾಗಿದ್ದು ಯೆರೂಸಲೇವಿುನಲ್ಲಿ ಎರಡು ವರುಷ ಆಳಿದನು. ಯೊಟ್ಟಾ ಊರಿನವಳೂ ಹಾರೂಚನ ಮಗಳೂ ಆದ ಮೆಷುಲ್ಲೆಮೆತ್ ಎಂಬಾಕೆಯು ಅವನ ತಾಯಿ.
Kannada Bible (KNCL) BSI 2016
ಆಮೋನನು ಅರಸನಾದಾಗ ಇಪ್ಪತ್ತೆರಡು ವರ್ಷ ವಯಸ್ಸು. ಜೆರುಸಲೇಮಿನಲ್ಲಿ ಎರಡು ವರ್ಷ ಆಳಿದನು. ಯೊಟ್ಟಾ ಊರಿನವಳೂ ಹಾರೂಚನ ಮಗಳೂ ಆದ ಮೆಷುಲ್ಲೆಮೆತ್ ಎಂಬಾಕೆ ಅವನ ತಾಯಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೋನನು ಅರಸನಾದಾಗ ಇಪ್ಪತ್ತೆರಡು ವರ್ಷದವನಾಗಿದ್ದನು, ಅವನು ಯೆರೂಸಲೇಮಿನಲ್ಲಿ ಎರಡು ವರ್ಷ ಆಳಿದನು. ಅವನ ತಾಯಿಯು ಯೋತ್ಬಾ ಊರಿನ ಹಾರೂಚನ ಮಗಳಾದ ಮೆಷುಲ್ಲೇಮೆತಳು.