2 Kings 21:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಮನಸ್ಸೆಯು ಮಾಡಿದನು. ಇಸ್ರೇಲರು ತಮ್ಮ ದೇಶಕ್ಕೆ ಬಂದಾಗ ಯೆಹೋವನು ಹೊರಗಟ್ಟಿದ ಅನ್ಯಜನಾಂಗಗಳ ಅಸಹ್ಯಕೃತ್ಯಗಳನ್ನು ಮನಸ್ಸೆಯು ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಯೆಹೋವನು ಇಸ್ರಾಯೇಲರ ರಾಜ್ಯದಿಂದ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
Kannada BSI Bible 2016
ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯ ಜನಾಂಗಗಳ ಅಸಹ್ಯವಾದವುಗಳ ಹಾಗೆಯೇ ಅವನು ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಇಸ್ರಾಯೇಲ್ಯರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಆತನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
Kannada Bible (KNCL) BSI 2016
ಸರ್ವೇಶ್ವರ ಇಸ್ರಯೇಲರ ನಾಡಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಆ ಸರ್ವೇಶ್ವರನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೆಹೋವ ದೇವರು ಇಸ್ರಾಯೇಲರ ಮುಂದೆ ಹೊರಡಿಸಿಬಿಟ್ಟ ಜನಾಂಗಗಳ ಅಸಹ್ಯವಾದವುಗಳನ್ನು ಅವನು ಅನುಸರಿಸಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.