2 Kings 21:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಮೋನನು ತನ್ನ ಪೂರ್ವಿಕರ ದೇವರಾದ ಯೆಹೋವನನ್ನು ತ್ಯಜಿಸಿದನು ಮತ್ತು ಯೆಹೋವನಿಗೆ ಮೆಚ್ಚಿಗೆಯಾದ ಮಾರ್ಗದಲ್ಲಿ ಜೀವಿಸಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತನ್ನ ಪೂರ್ವಿಕರ ದೇವರಾದ ಯೆಹೋವನನ್ನೂ ಆರಾಧಿಸದೆ, ಆತನಿಗೆ ಮೆಚ್ಚಿಗೆಯಾಗುವಂತೆ ನಡೆಯುವ ಮಾರ್ಗವನ್ನೂ ಬಿಟ್ಟುಬಿಟ್ಟನು.
Kannada BSI Bible 2016
ತನ್ನ ತಂದೆಯು ನಡೆದ ಎಲ್ಲಾ ಮಾರ್ಗದಲ್ಲಿ ನಡೆದು ತನ್ನ ತಂದೆಯು ಸೇವಿಸಿದ ವಿಗ್ರಹಗಳನ್ನು ತಾನೂ ಸೇವಿಸಿ ಅವುಗಳನ್ನು ಆರಾಧಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತನ್ನ ತಂದೆಯ ಮಾರ್ಗದಲ್ಲಿ ನಡೆದು ಅವನು ಪೂಜಿಸಿದ ವಿಗ್ರಹಗಳನ್ನು ತಾನೂ ಪೂಜಿಸಿ ಅವುಗಳಿಗೆ ಅಡ್ಡಬಿದ್ದನು.
Kannada Bible (KNCL) BSI 2016
ಅವನು ಪೂಜಿಸಿದ ವಿಗ್ರಹಗಳನ್ನು ತಾನೂ ಪೂಜಿಸಿ ಅವುಗಳಿಗೆ ಅಡ್ಡಬಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತನ್ನ ತಂದೆಯು ನಡೆದ ಸಮಸ್ತ ಮಾರ್ಗದಲ್ಲಿ ನಡೆದು, ತನ್ನ ತಂದೆಯು ಸೇವಿಸಿದ ವಿಗ್ರಹಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದನು.