2 Kings 21:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಮೋನನನ್ನು ಉಜ್ಜನವನದಲ್ಲಿ ಅವನ ಸ್ಮಶಾನದಲ್ಲಿ ಸಮಾಧಿಮಾಡಿದರು. ಆಮೋನನ ಮಗನಾದ ಯೋಷೀಯನು ಹೊಸ ರಾಜನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಮೋನನ ಶವವನ್ನು ಉಜ್ಜನ ವನದಲ್ಲಿ ಸಮಾಧಿಮಾಡಿದರು. ಅಲ್ಲಿ ಅವನು ಮೊದಲೇ ತನಗೋಸ್ಕರ ಒಂದು ಸಮಾಧಿಯನ್ನು ಸಿದ್ಧಪಡಿಸಿಟ್ಟಿದ್ದನು.
Kannada BSI Bible 2016
ಅವನ ಶವವನ್ನು ಉಜ್ಜನ ತೋಟದಲ್ಲಿದ್ದ ಸಮಾಧಿ ಯಲ್ಲಿ ಹೂಣಿಟ್ಟರು. ಅವನ ಮಗನಾದ ಯೋಷೀ ಯನು ಅವನಿಗೆ ಬದಲಾಗಿ ಅರಸನಾದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಶವವನ್ನು ಉಜ್ಜನ ವನದಲ್ಲಿ ಸಮಾಧಿಮಾಡಿದರು. ಅಲ್ಲಿ ಅವನು ಮೊದಲೇ ತನಗೋಸ್ಕರ ಒಂದು ಸಮಾಧಿಯನ್ನು ಸಿದ್ಧಪಡಿಸಿಟ್ಟಿದ್ದನು. ಅವನಿಗೆ ಬದಲಾಗಿ ಅವನ ಮಗನಾದ ಯೋಷೀಯನು ಅರಸನಾದನು.
Kannada Bible (KNCL) BSI 2016
ಅವನ ಶವವನ್ನು ಉಜ್ಜನ ವನದಲ್ಲಿ ಸಮಾಧಿಮಾಡಿದರು. ಅಲ್ಲಿ ಅವನು ಮೊದಲೇ ತನಗಾಗಿ ಒಂದು ಸಮಾಧಿಯನ್ನು ಸಿದ್ಧಪಡಿಸಿಟ್ಟಿದ್ದನು. ಅವನ ಸ್ಥಾನದಲ್ಲಿ ಅವನ ಮಗ ಯೋಷೀಯನು ಅರಸನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಶವವನ್ನು, ಉಜ್ಜನ ತೋಟದಲ್ಲಿ ಅವನು ಮೊದಲೇ ತನಗೋಸ್ಕರ ಸಿದ್ದಪಡಿಸಿಟ್ಟಿದ್ದ ಸಮಾಧಿಯಲ್ಲಿ ಹೂಣಿಟ್ಟರು. ಅವನ ಮಗ ಯೋಷೀಯನು ಅವನಿಗೆ ಬದಲಾಗಿ ಅರಸನಾದನು.