2 Kings 21:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮನಸ್ಸೆಯು ಅಶೇರ ವಿಗ್ರಹಗಳನ್ನು ಕೆತ್ತಿಸಿದನು. ಅವನು ಈ ವಿಗ್ರಹಗಳನ್ನು ಆಲಯದಲ್ಲಿ ಇರಿಸಿದನು. ಯೆಹೋವನು ದಾವೀದನಿಗೆ ಮತ್ತು ದಾವೀದನ ಮಗನಾದ ಸೊಲೊಮೋನನಿಗೆ ಈ ಆಲಯವನ್ನು ಕುರಿತು ಹೀಗೆ ಹೇಳಿದ್ದನು: “ಇಸ್ರೇಲಿನಲ್ಲಿರುವ ಎಲ್ಲಾ ನಗರಗಳಿಂದ ನಾನು ಜೆರುಸಲೇಮನ್ನು ಆರಿಸಿದ್ದೇನೆ. ನಾನು ನನ್ನ ಹೆಸರನ್ನು ಜೆರುಸಲೇಮಿನ ಆಲಯದಲ್ಲಿ ಎಂದೆಂದಿಗೂ ಇರಿಸುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಾನು ಮಾಡಿಸಿದ ಅಶೇರ ವಿಗ್ರಹಸ್ತಂಭವನ್ನು ಯೆಹೋವನ ಆಲಯದಲ್ಲಿ ಇಡಿಸಿದನು. ಯೆಹೋವನು ಆ ಆಲಯದ ವಿಷಯದಲ್ಲಿ ದಾವೀದನಿಗೂ ಮತ್ತು ಅವನ ಮಗನಾದ ಸೊಲೊಮೋನನಿಗೂ, “ಈ ಆಲಯದಲ್ಲಿಯೂ, ಇಸ್ರಾಯೇಲರ ಸಕಲ ಗೋತ್ರಗಳಲ್ಲಿಯೂ, ನಾನು ಆರಿಸಿಕೊಂಡ ಯೆರೂಸಲೇಮಿನಲ್ಲಿಯೂ ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನು
Kannada BSI Bible 2016
ಈ ಮನೆಯಲ್ಲಿಯೂ ಇಸ್ರಾಯೇಲಿನ ಸಕಲ ಗೋತ್ರಗಳ ಲ್ಲಿಯೂ ನಾನು ಆದುಕೊಂಡ ಯೆರೂಸಲೇಮಿನ ಲ್ಲಿಯೂ ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನೆಂದು ಕರ್ತನು ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ ಯಾವದನ್ನು ಕುರಿತು ಹೇಳಿದ್ದನೋ ಆ ಮನೆಯಲ್ಲಿ ತಾನು ಮಾಡಿದ ತೋಪಿನ ಕೆತ್ತಿದ ವಿಗ್ರಹವನ್ನು ಇಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತಾನು ಮಾಡಿಸಿದ ಅಶೇರವಿಗ್ರಹಸ್ತಂಭವನ್ನು ದೇವಾಲಯದಲ್ಲಿ ಇಡಿಸಿದನು. ಯೆಹೋವನು ಆ ಆಲಯದ ವಿಷಯದಲ್ಲಿ ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ - ಇಸ್ರಾಯೇಲ್ಯರು ತಮಗೆ ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ನನ್ನ ಧರ್ಮಶಾಸ್ತ್ರದ ನಿಬಂಧನೆಗಳನ್ನು ಅನುಸರಿಸಿ ನಡೆಯುವದಾದರೆ
Kannada Bible (KNCL) BSI 2016
ತಾನು ಮಾಡಿಸಿದ ಅಶೇರ ವಿಗ್ರಹಸ್ತಂಭವನ್ನು ದೇವಾಲಯದಲ್ಲಿ ಇಡಿಸಿದನು. ಸರ್ವೇಶ್ವರ ಆ ಆಲಯದಲ್ಲಿ ದಾವೀದನಿಗೂ ಅವನ ಮಗ ಸೊಲೊಮೋನನಿಗೂ, “ಇಸ್ರಯೇಲರು ತಮಗೆ ಮೋಶೆಯ ಮುಖಾಂತರ ಕೊಡಲಾದ ನನ್ನ ಧರ್ಮಶಾಸ್ತ್ರದ ನಿಬಂಧನೆಗಳನ್ನು ಅನುಸರಿಸಿ ನಡೆಯುವುದಾದರೆ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಈ ಆಲಯದಲ್ಲಿಯೂ, ಇಸ್ರಾಯೇಲಿನ ಸಕಲ ಗೋತ್ರಗಳಲ್ಲಿಯೂ, ನಾನು ಆಯ್ದುಕೊಂಡ ಯೆರೂಸಲೇಮಿನಲ್ಲಿಯೂ, ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನು,” ಎಂದು ಯೆಹೋವ ದೇವರು ದಾವೀದನಿಗೂ, ಅವನ ಮಗನಾದ ಸೊಲೊಮೋನನಿಗೂ ಯಾವುದನ್ನು ಕುರಿತು ಹೇಳಿದ್ದರೋ, ಆ ಆಲಯದಲ್ಲಿ ತಾನು ಮಾಡಿದ ಅಶೇರ ವಿಗ್ರಹಸ್ತಂಭವನ್ನು ಇಟ್ಟನು.