2 Kings 22:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋಷೀಯನು ಆಳಲಾರಂಭಿಸಿದಾಗ ಅವನಿಗೆ ಎಂಟು ವರ್ಷ ವಯಸ್ಸಾಗಿತ್ತು. ಅವನು ಮೂವತ್ತೊಂದು ವರ್ಷ ಜೆರುಸಲೇಮಿನಲ್ಲಿ ಆಳಿದನು. ಅವನ ತಾಯಿಯ ಹೆಸರು ಯದೀದಾ. ಇವಳು ಬೊಚ್ಕತ್ ಎಂಬ ಸ್ಥಳದ ಅದಾಯ ಎಂಬವನ ಮಗಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಷೀಯನು ಅರಸನಾದಾಗ ಎಂಟು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಮೂವತ್ತೊಂದು ವರ್ಷ ಆಳಿದನು. ಬೊಚ್ಕತೂರಿನವಳೂ ಅದಾಯನ ಮಗಳೂ ಆದ ಯೆದೀದಾ ಎಂಬಾಕೆಯು ಅವನ ತಾಯಿ.
Kannada BSI Bible 2016
ಯೋಷೀಯನು ಆಳಲು ಆರಂಭಿಸಿದಾಗ ಎಂಟು ವರುಷದವನಾಗಿದ್ದು ಮೂವ ತ್ತೊಂದು ವರುಷ ಯೆರೂಸಲೇಮಿನಲ್ಲಿ ಆಳಿದನು. ಅವನ ತಾಯಿ ಬೊಚ್ಕತೂರಿನ ಅದಾಯನ ಮಗಳಾ ಗಿದ್ದು, ಯೆದೀದಾಳೆಂಬ ಹೆಸರುಳ್ಳವಳಾಗಿದ್ದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಷೀಯನು ಅರಸನಾದಾಗ ಎಂಟು ವರುಷದವನಾಗಿದ್ದು ಯೆರೂಸಲೇವಿುನಲ್ಲಿ ಮೂವತ್ತೊಂದು ವರುಷ ಆಳಿದನು. ಬೊಚ್ಕತೂರಿನವಳೂ ಅದಾಯನ ಮಗಳೂ ಆದ ಯೆದೀದಾ ಎಂಬಾಕೆಯು ಅವನ ತಾಯಿ.
Kannada Bible (KNCL) BSI 2016
ಯೋಷೀಯನು ಅರಸನಾದಾಗ ಅವನಿಗೆ ಎಂಟು ವರ್ಷ ವಯಸ್ಸು. ಜೆರುಸಲೇಮಿನಲ್ಲಿ ಅವನು ಆಳಿದ್ದು ಮೂವತ್ತೊಂದು ವರ್ಷ. ಬೊಚ್ಕತೂರಿನವಳೂ ಅದಾಯನ ಮಗಳೂ ಆದ ಯೆದೀದಾ ಎಂಬಾಕೆ ಅವನ ತಾಯಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಷೀಯನು ಅರಸನಾದಾಗ ಎಂಟು ವರ್ಷದವನಾಗಿದ್ದನು, ಅವನು ಮೂವತ್ತೊಂದು ವರ್ಷ ಯೆರೂಸಲೇಮಿನಲ್ಲಿ ಆಳಿದನು. ಅವನ ತಾಯಿ ಬೊಚ್ಕತಿನ ಅದಾಯನ ಮಗಳಾದ ಯೆದೀದಾ ಎಂಬವಳು.