2 Kings 22:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯೆಹೂದದ ರಾಜನಾದ ಯೋಷೀಯನು ಯೆಹೋವನ ಸಲಹೆಯನ್ನು ಕೇಳಲು ನಿಮ್ಮನ್ನು ಕಳುಹಿಸಿದನು. ಯೋಷೀಯನಿಗೆ ಈ ಸಂಗತಿಗಳನ್ನು ಹೇಳಿ: ‘ನೀನು ಕೇಳುವ ಈ ಮಾತುಗಳನ್ನು ಇಸ್ರೇಲರ ದೇವರಾದ ಯೆಹೋವನು ಹೇಳಿದನು. ಈ ದೇಶವನ್ನು ಮತ್ತು ಇಲ್ಲಿ ವಾಸಿಸುವ ಜನರನ್ನು ಕುರಿತು ನಾನು ಹೇಳಿದ ಸಂಗತಿಗಳನ್ನು ನೀನು ಕೇಳಿರುವೆ. ನಿನ್ನ ಹೃದಯವು ಮೃದುವಾಗಿರುವುದರಿಂದ, ನೀನು ಅವುಗಳನ್ನು ಕೇಳಿದಾಗ ದೈನ್ಯತೆಯುಳ್ಳವನಾದೆ. ಈ ಸ್ಥಳಕ್ಕೆ (ಜೆರುಸಲೇಮಿಗೆ) ಆ ಭೀಕರ ಸಂಗತಿಗಳಾಗುತ್ತವೆಯೆಂದು ನಾನು ಹೇಳಿದೆ. ಆಗ ನೀನು ದುಃಖದಿಂದ ನಿನ್ನ ಬಟ್ಟೆಗಳನ್ನು ಹರಿದುಕೊಂಡು ಅಳಲಾರಂಭಿಸಿದೆ. ಆದಕಾರಣವೇ ನಾನು ನಿನಗೆ ಕಿವಿಗೊಟ್ಟೆನು.’ ಯೆಹೋವನು ಹೇಳುವುದೇನೆಂದರೆ: (Verses 18-19)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಾನು ಕೇಳಿದ ವಾಕ್ಯಗಳ ವಿಷಯವಾಗಿ ಯೆಹೋವನ ಬಳಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ತಿಳಿಸಬೇಕಾದ ಇಸ್ರಾಯೇಲರ ದೇವರಾದ ಯೆಹೋವನ ಮಾತೇನೆಂದರೆ,
Kannada BSI Bible 2016
ಆದರೆ ಕರ್ತನಿಂದ ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದು ಇದೇ--ನೀವು ಕೇಳಿದ ಮಾತು ಗಳನ್ನು ಕುರಿತು ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ --
Kannada BSI JV (ಕನ್ನಡ ಸತ್ಯವೇದವು J.V. (BSI))
ತಾನು ಕೇಳಿದ ವಾಕ್ಯಗಳ ವಿಷಯವಾಗಿ ಯೆಹೋವನ ಬಳಿಯಲ್ಲಿ ವಿಚಾರಿಸುವದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ತಿಳಿಸಬೇಕಾದ ಇಸ್ರಾಯೇಲ್‍ದೇವರಾದ ಯೆಹೋವನ ಮಾತೇನಂದರೆ -
Kannada Bible (KNCL) BSI 2016
ತಾನು ಕೇಳಿದ ವಾಕ್ಯಗಳ ವಿಷಯವಾಗಿ ಸರ್ವೇಶ್ವರನ ಬಳಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಜುದೇಯದ ಅರಸರಿಗೆ ನೀವು ತಿಳಿಸಬೇಕಾದ ಇಸ್ರಯೇಲ್ ದೇವರಾದ ಸರ್ವೇಶ್ವರನ ಮಾತು ಏನೆಂದರೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೆಹೋವ ದೇವರನ್ನು ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದು ಇದೇ, ‘ನೀವು ಕೇಳಿದ ಮಾತುಗಳನ್ನು ಕುರಿತು ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ,