2 Kings 22:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
‘ನೀನು ನಿನ್ನ ಪೂರ್ವಿಕರ ಜೊತೆ ಸೇರುವಂತೆ ನಾನು ಮಾಡುತ್ತೇನೆ. ನೀನು ಶಾಂತಿಯಿಂದ ಸತ್ತು ನಿನ್ನ ಸಮಾಧಿಯನ್ನು ಸೇರುವೆ. ಈ ದೇಶದ (ಜೆರುಸಲೇಮಿನ) ಮೇಲೆ ನಾನು ತರಲಿರುವ ಕೇಡುಗಳನ್ನು ನಿನ್ನ ಕಣ್ಣುಗಳು ನೋಡುವುದಿಲ್ಲ’ ಎಂಬುದೇ” ಎಂದು ಹೇಳಿದಳು. ನಂತರ ಯಾಜಕನಾದ ಹಿಲ್ಕೀಯ, ಅಹೀಕಾಮ್, ಅಕ್ಬೋರ್, ಶಾಫಾನ್ ಮತ್ತು ಅಸಾಯ ಹಿಂತಿರುಗಿ ಬಂದು ರಾಜನಿಗೆ ತಿಳಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ, ‘ನಾನು ಈ ದೇಶಕ್ಕೆ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮರಣಹೊಂದಿ ಸಮಾಧಿ ಸೇರುವಂತೆ ಆಶೀರ್ವದಿಸುವೆನು’ ಎಂದು ಹೇಳಿದ್ದನ್ನು ತಿಳಿಸಿರಿ” ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು.
Kannada BSI Bible 2016
ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವಿ; ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವದಿಲ್ಲ ಎಂಬದು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ತಿಳಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಈ ದೇಶಕ್ಕೆ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮೃತಿಹೊಂದಿ ಸಮಾಧಿಸೇರುವಂತೆ ಅನುಗ್ರಹಿಸುವೆನು ಎಂಬದೇ ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು.
Kannada Bible (KNCL) BSI 2016
ನಾನು ಈ ನಾಡಿಗೆ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮೃತಿಹೊಂದಿ ಸಮಾಧಿ ಸೇರುವಂತೆ ಅನುಗ್ರಹಿಸುವೆನು,’ ಎಂಬುದಾಗಿ ತಿಳಿಸಿರಿ,” ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವೆ. ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವುದಿಲ್ಲ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದಳು. ಅವರು ಹೋಗಿ ಈ ಉತ್ತರವನ್ನು ಅರಸನಿಗೆ ತಿಳಿಸಿದರು.