2 Kings 22:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರಧಾನಯಾಜಕನಾದ ಹಿಲ್ಕೀಯನು ಕಾರ್ಯದರ್ಶಿಯಾದ ಶಾಫಾನನಿಗೆ, “ದೇವಾಲಯದಲ್ಲಿ ನನಗೆ ಧರ್ಮಶಾಸ್ತ್ರವು ಸಿಕ್ಕಿತು” ಎಂದು ಹೇಳಿದನು. ಹಿಲ್ಕೀಯನು ಅದನ್ನು ಶಾಫಾನನಿಗೆ ನೀಡಿದನು. ಶಾಫಾನನು ಅದನ್ನು ಓದಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರಧಾನ ಯಾಜಕನಾದ ಹಿಲ್ಕೀಯನು ಲೇಖಕನಾದ ಶಾಫಾನನಿಗೆ, “ಯೆಹೋವನ ಆಲಯದಲ್ಲಿ ನನಗೆ ಧರ್ಮೋಪದೇಶಗ್ರಂಥವು ಸಿಕ್ಕಿರುತ್ತದೆ” ಎಂದು ಹೇಳಿ, ಅದನ್ನು ಅವನ ಕೈಯಲ್ಲಿ ಕೊಟ್ಟನು. ಶಾಫಾನನು ಅದನ್ನು ಓದಿದನು.
Kannada BSI Bible 2016
ಆಗ ಪ್ರಧಾನ ಯಾಜಕನಾದ ಹಿಲ್ಕೀಯನು ಲೇಖಕ ನಾದ ಶಾಫಾನನಿಗೆ--ನಾನು ಕರ್ತನ ಮನೆಯಲ್ಲಿ ನ್ಯಾಯಪ್ರಮಾಣದ ಪುಸ್ತಕವನ್ನು ಕಂಡುಕೊಂಡಿದ್ದೇನೆ ಅಂದನು; ಹಿಲ್ಕೀಯನು ಆ ಪುಸ್ತಕವನ್ನು ಶಾಫಾನನಿಗೆ ಕೊಟ್ಟನು; ಅವನು ಅದನ್ನು ಓದಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಹಾಯಾಜಕನಾದ ಹಿಲ್ಕೀಯನು ಲೇಖಕನಾದ ಶಾಫಾನನಿಗೆ - ಯೆಹೋವನ ಆಲಯದಲ್ಲಿ ನನಗೆ ಧರ್ಮೋಪದೇಶ ಗ್ರಂಥವು ಸಿಕ್ಕಿರುತ್ತದೆ ಎಂದು ಹೇಳಿ ಅದನ್ನು ಅವನ ಕೈಯಲ್ಲಿ ಕೊಟ್ಟನು; ಶಾಫಾನನು ಓದಿದನು.
Kannada Bible (KNCL) BSI 2016
ಪ್ರಧಾನ ಯಾಜಕ ಹಿಲ್ಕೀಯನು ಲೇಖಕ ಶಾಫಾನನಿಗೆ, “ಸರ್ವೇಶ್ವರನ ಆಲಯದಲ್ಲಿ ನನಗೆ ಧರ್ಮೋಪದೇಶ ಗ್ರಂಥವು ಸಿಕ್ಕಿರುತ್ತದೆ,” ಎಂದು ಹೇಳಿ ಅದನ್ನು ಅವನ ಕೈಯಲ್ಲಿ ಕೊಟ್ಟನು; ಶಾಫಾನನು ಓದಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮಹಾಯಾಜಕನಾದ ಹಿಲ್ಕೀಯನು ಕಾರ್ಯದರ್ಶಿಯಾದ ಶಾಫಾನನಿಗೆ, “ನನಗೆ ಯೆಹೋವ ದೇವರ ಆಲಯದಲ್ಲಿ ಮೋಶೆಯ ನಿಯಮದ ಗ್ರಂಥವು ಸಿಕ್ಕಿರುತ್ತದೆ,” ಎಂದನು. ಹಿಲ್ಕೀಯನು ಆ ಗ್ರಂಥವನ್ನು ಶಾಫಾನನಿಗೆ ಒಪ್ಪಿಸಿದನು. ಅವನು ಅದನ್ನು ಓದಿದನು.