2 Kings 22:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕಾರ್ಯದರ್ಶಿಯಾದ ಶಾಫಾನನು ರಾಜನಾದ ಯೋಷಿಯನ ಬಳಿಗೆ ಬಂದು ಅವನಿಗೆ, “ನಿನ್ನ ಸೇವಕರು ದೇವಾಲಯದಲ್ಲಿದ್ದ ಹಣವನ್ನು ವ್ಯಯಮಾಡಿದರು. ಅವರು ಆ ಹಣವನ್ನು ದೇವಾಲಯದಲ್ಲಿ ಕೆಲಸ ಮಾಡಿಸುವ ಮೇಲ್ವಿಚಾರಕರಿಗೆ ಒಪ್ಪಿಸಿದರು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಲೇಖಕನಾದ ಶಾಫಾನನು ಹಿಂತಿರುಗಿ ಅರಸನ ಬಳಿಗೆ ಹೋಗಿ, “ನಿನ್ನ ಸೇವಕರು ಯೆಹೋವನ ದೇವಾಲಯದಲ್ಲಿ ಸಂಗ್ರಹವಾದ ಹಣವನ್ನು ತೆಗೆದು ದೇವಾಲಯದ ಕೆಲಸವನ್ನು ಮಾಡಿಸುವ ಮುಖ್ಯಸ್ಥರಿಗೆ ಒಪ್ಪಿಸಿದರು.
Kannada BSI Bible 2016
ಲೇಖಕನಾದ ಶಾಫಾನನು ಅರಸನ ಬಳಿಗೆ ಬಂದು ಅರಸನಿಗೆಕರ್ತನ ಮನೆಯಲ್ಲಿ ದೊರಕಿದ ಹಣವನ್ನು ನಿನ್ನ ಸೇವಕರು ಕೂಡಿಸಿ ಕರ್ತನ ಆಲಯದ ಕೆಲಸ ಮಾಡು ವವರ ಮೇಲಿರುವ ಕೆಲಸಗಾರರ ಕೈಯಲ್ಲಿ ಒಪ್ಪಿಸಿದ್ದಾರೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಅವನು ಹಿಂದಿರುಗಿ ಅರಸನ ಬಳಿಗೆ ಹೋಗಿ - ನಿನ್ನ ಸೇವಕರು ದೇವಾಲಯದಲ್ಲಿ ಸಂಗ್ರಹವಾದ ಹಣವನ್ನು ತೆಗೆದು ದೇವಾಲಯದ ಕೆಲಸವನ್ನು ಮಾಡಿಸುವ ಮೊಕ್ತೇಸರರಿಗೆ ಒಪ್ಪಿಸಿದರು;
Kannada Bible (KNCL) BSI 2016
ಅನಂತರ ಅವನು ಹಿಂದಿರುಗಿ ಅರಸನ ಬಳಿಗೆ ಹೋಗಿ, “ನಿಮ್ಮ ಸೇವಕರು ದೇವಾಲಯಲ್ಲಿ ಸಂಗ್ರಹವಾದ ಹಣವನ್ನು ತೆಗೆದು ದೇವಾಲಯದ ಕೆಲಸವನ್ನು ಮಾಡಿಸುವ ಮೇಸ್ತ್ರಿಗಳಿಗೆ ಒಪ್ಪಿಸಿದರು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಾರ್ಯದರ್ಶಿಯಾದ ಶಾಫಾನನು ಅರಸನ ಬಳಿಗೆ ಬಂದು ಅರಸನಿಗೆ, “ಯೆಹೋವ ದೇವರ ಆಲಯದಲ್ಲಿ ದೊರಕಿದ ಹಣವನ್ನು ನಿನ್ನ ಸೇವಕರು ಕೂಡಿಸಿ, ಯೆಹೋವ ದೇವರ ಆಲಯದ ಕೆಲಸಕ್ಕೆ ನೇಮಕಗೊಂಡ ಮೇಲ್ವಿಚಾರಕರ ಕೈಯಲ್ಲಿ ಒಪ್ಪಿಸಿದ್ದಾರೆ,” ಎಂದನು.