2 Kings 23:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪೂರ್ವಕಾಲದಲ್ಲಿ, ಯೆಹೂದದ ರಾಜರುಗಳು ಅಹಾಬನ ಕಟ್ಟಡದ ಮಾಳಿಗೆಯ ಮೇಲೆ ಯಜ್ಞವೇದಿಕೆಗಳನ್ನು ನಿರ್ಮಿಸಿದ್ದರು. ರಾಜನಾದ ಮನಸ್ಸೆಯು ದೇವಾಲಯದ ಎರಡು ಪ್ರಾಕಾರಗಳಲ್ಲಿ ಯಜ್ಞವೇದಿಕೆಗಳನ್ನು ನಿರ್ಮಿಸಿದ್ದನು. ಯೋಷೀಯನು ಆ ಯಜ್ಞವೇದಿಕೆಗಳನ್ನೆಲ್ಲ ನಾಶಗೊಳಿಸಿ, ಅವುಗಳ ಚೂರುಗಳನ್ನು ಕಿದ್ರೋನ್ ಕಣಿವೆಗೆ ಎಸೆದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ, ಯೆಹೂದ್ಯರ ಅರಸರು ದೇವಸ್ಥಾನದ ಮಾಳಿಗೆಯ ಮೇಲೆ ಆಹಾಜನ ಉಪ್ಪರಿಗೆಯ ಹತ್ತಿರ ಕಟ್ಟಿಸಿದ್ದ ಯಜ್ಞವೇದಿಗಳನ್ನೂ, ಮನಸ್ಸೆಯು ಯೆಹೋವನ ಆಲಯದ ಎರಡು ಪ್ರಾಕಾರಗಳಲ್ಲಿ ಕಟ್ಟಿಸಿದ ಯಜ್ಞವೇದಿಗಳನ್ನೂ ಕೆಡವಿ ಪುಡಿಪುಡಿ ಮಾಡಿ ಅವುಗಳ ಧೂಳನ್ನು ಕಿದ್ರೋನ್ ಹಳ್ಳದಲ್ಲಿ ಹಾಕಿಸಿದನು.
Kannada BSI Bible 2016
ಯೆಹೂದದ ಅರಸರು ಉಂಟು ಮಾಡಿದ ಆಹಾಜನ ಮೇಲು ಮಾಳಿಗೆಯ ಮೇಲೆ ಇದ್ದ ಬಲಿಪೀಠಗಳನ್ನೂ ಮನಸ್ಸೆಯು ಕರ್ತನ ಮನೆಯ ಎರಡು ಅಂಗಳಗಳಲ್ಲಿ ಮಾಡಿದ ಬಲಿಪೀಠ ಗಳನ್ನೂ ಅರಸನು ಕೆಡವಿಸಿ ಅಲ್ಲಿಂದ ಅದರ ಧೂಳನ್ನು ಕಿದ್ರೋನ್‌ ಹಳ್ಳದಲ್ಲಿ ಹಾಕಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಯೆಹೂದ್ಯರ ಅರಸರು ದೇವಸ್ಥಾನದ ಮಾಳಿಗೆಯ ಮೇಲೆ ಆಹಾಜನ ಉಪ್ಪರಿಗೆಯ ಹತ್ತಿರ ಕಟ್ಟಿಸಿದ್ದ ಯಜ್ಞವೇದಿಗಳನ್ನೂ ಮನಸ್ಸೆಯು ಯೆಹೋವನ ಆಲಯದ ಎರಡು ಪ್ರಾಕಾರಗಳಲ್ಲಿ ಕಟ್ಟಿಸಿದ್ದ ಯಜ್ಞವೇದಿಗಳನ್ನೂ ಕೆಡವಿ ಪುಡಿಪುಡಿಮಾಡಿ ಅವುಗಳ ಧೂಳನ್ನು ಕಿದ್ರೋನ್‍ಹಳ್ಳದಲ್ಲಿ ಹಾಕಿಸಿದನು.
Kannada Bible (KNCL) BSI 2016
ಇದಲ್ಲದೆ ಜುದೇಯದ ಅರಸರು ದೇವಸ್ಥಾನದ ಮಾಳಿಗೆಯ ಮೇಲೆ ಆಹಾಜನ ಉಪ್ಪರಿಗೆಯ ಹತ್ತಿರ ಕಟ್ಟಿಸಿದ್ದ ಬಲಿಪೀಠಗಳನ್ನು ಹಾಗು ಮನಸ್ಸೆಯು ಸರ್ವೇಶ್ವರನ ಆಲಯದ ಎರಡು ಪ್ರಾಕಾರಗಳಲ್ಲಿ ಕಟ್ಟಿಸಿದ್ದ ಬಲಿಪೀಠಗಳನ್ನು ಕೆಡವಿ ಪುಡಿಪುಡಿಮಾಡಿ ಅವುಗಳ ಧೂಳನ್ನು ಕಿದ್ರೋನ್ ಹಳ್ಳದಲ್ಲಿ ಹಾಕಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದದ ಅರಸರು ಮಾಡಿದ ಆಹಾಜನ ಮೇಲು ಮಾಳಿಗೆಯ ಮೇಲೆ ಇದ್ದ ಬಲಿಪೀಠಗಳನ್ನೂ, ಮನಸ್ಸೆಯು ಯೆಹೋವ ದೇವರ ಮನೆಯ ಎರಡು ಅಂಗಳಗಳಲ್ಲಿ ಮಾಡಿದ ಬಲಿಪೀಠಗಳನ್ನೂ ಅರಸನು ಕೆಡವಿಸಿ, ಅಲ್ಲಿಂದ ಅದರ ಧೂಳನ್ನು ಕಿದ್ರೋನ್ ಕಣಿವೆಯಲ್ಲಿ ಹಾಕಿಸಿಬಿಟ್ಟನು.