2 Kings 23:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪೂರ್ವಕಾಲದಲ್ಲಿ, ರಾಜನಾದ ಸೊಲೊಮೋನನು ಜೆರುಸಲೇಮಿನ ಬಳಿಯಲ್ಲಿದ್ದ ವಿಘ್ನಪರ್ವತದ ಮೇಲೆ ಕೆಲವು ಉನ್ನತಸ್ಥಳಗಳನ್ನು ನಿರ್ಮಿಸಿದ್ದನು. ಆ ಉನ್ನತಸ್ಥಳಗಳು ಪರ್ವತದ ದಕ್ಷಿಣದಿಕ್ಕಿನ ಮೇಲಿದ್ದವು. ರಾಜನಾದ ಸೊಲೊಮೋನನು ಚೀದೋನ್ಯರ ಅಷ್ಟೋರೆತ್, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹಗಳಿಗಾಗಿ ಆ ಉನ್ನತಸ್ಥಳಗಳನ್ನು ನಿರ್ಮಿಸಿದ್ದನು. ಆದರೆ ರಾಜನಾದ ಯೋಷೀಯನು ಆ ಪೂಜಾಸ್ಥಳಗಳನ್ನೆಲ್ಲಾ ನಾಶಪಡಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರ ಅರಸನಾದ ಸೊಲೊಮೋನನು ಚೀದೋನ್ಯರ ಅಷ್ಟೋರೆತ್ ದೇವತೆ, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹಗಳಿಗಾಗಿ ಯೆರೂಸಲೇಮಿನ ಎದುರಿನಲ್ಲಿಯೂ, ವಿಘ್ನಪರ್ವತದ ದಕ್ಷಿಣದಿಕ್ಕಿನಲ್ಲಿಯೂ ಸ್ಥಾಪಿಸಿದ್ದ ಪೂಜಾಸ್ಥಳಗಳನ್ನು ಅರಸನು ಹೊಲೆ ಮಾಡಿದನು.
Kannada BSI Bible 2016
ಇದಲ್ಲದೆ ಯೆರೂಸಲೇಮಿನ ಮುಂದೆ ಮೋಸದ ಬೆಟ್ಟದ ಬಲ ಪಾರ್ಶ್ವದಲ್ಲಿದ್ದ ಚೀದೋನ್ಯರ ಅಸಹ್ಯಕರವಾದ ಅಷ್ಟೋ ರೆತಿಗೂ ಮೋವಾಬ್ಯರ ಅಸಹ್ಯಕರವಾದ ಕೆಮೋಷ ನಿಗೂ ಅಮ್ಮೋನಿನ ಮಕ್ಕಳ ಅಸಹ್ಯಕರವಾದ ಮಿಲ್ಕೋ ಮ್‌ನಿಗೂ ಇಸ್ರಾಯೇಲಿನ ಅರಸನಾದ ಸೊಲೊ ಮೋನನು ಕಟ್ಟಿಸಿದ ಉನ್ನತ ಸ್ಥಳಗಳನ್ನೂ ಅರಸನು ಹೊಲೆಮಾಡಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ಅರಸನಾದ ಸೊಲೊಮೋನನು ಚೀದೋನ್ಯರ ಅಷ್ಟೋರೆತ್, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ವಿುಲ್ಕೋಮ್ ಎಂಬ ಅಸಹ್ಯವಿಗ್ರಹಗಳಿಗೋಸ್ಕರ ಯೆರೂಸಲೇವಿುನ ಎದುರಿನಲ್ಲಿಯೂ ವಿಘ್ನಪರ್ವತದ ದಕ್ಷಿಣದಿಕ್ಕಿನಲ್ಲಿಯೂ ಸ್ಥಾಪಿಸಿದ ಪೂಜಾಸ್ಥಳಗಳನ್ನು ಇವನು ಹೊಲೆಮಾಡಿದನು.
Kannada Bible (KNCL) BSI 2016
ಇಸ್ರಯೇಲರ ಅರಸ ಸೊಲೊಮೋನನು ಸಿದೋನ್ಯರ ಅಷ್ಟೋರೆತ್, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹಗಳಿಗಾಗಿ ಜೆರುಸಲೇಮಿನ ಎದುರಿನಲ್ಲೂ ಎಘ್ನಪರ್ವತದ ದಕ್ಷಿಣದಿಕ್ಕಿನಲ್ಲೂ ಸ್ಥಾಪಿಸಿದ ಪೂಜಾಸ್ಥಳಗಳನ್ನು ಇವನು ಹೊಲೆಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಯೆರೂಸಲೇಮಿನ ಮುಂದೆ ವಿಘ್ನ ಬೆಟ್ಟದ ದಕ್ಷಿಣದಲ್ಲಿದ್ದ ಸೀದೋನ್ಯರ ಅಸಹ್ಯಕರವಾದ ಅಷ್ಟೋರೆತಿಗೂ, ಮೋವಾಬ್ಯರ ಅಸಹ್ಯಕರವಾದ ಕೆಮೋಷನಿಗೂ, ಅಮ್ಮೋನ್ಯರ ಅಸಹ್ಯಕರವಾದ ಮಿಲ್ಕೋಮನಿಗೂ ಇಸ್ರಾಯೇಲಿನ ಅರಸನಾದ ಸೊಲೊಮೋನನು ಕಟ್ಟಿಸಿದ ಉನ್ನತ ಪೂಜಾಸ್ಥಳಗಳನ್ನೂ ಯೋಷೀಯನು ಅಶುದ್ಧ ಮಾಡಿದನು.