2 Kings 23:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಷೀಯನು ಸಮಾರ್ಯದ ನಗರಗಳಲ್ಲಿದ್ದ ಉನ್ನತಸ್ಥಳಗಳ ಆಲಯಗಳನ್ನೆಲ್ಲ ನಾಶಗೊಳಿಸಿದನು. ಇಸ್ರೇಲಿನ ರಾಜರುಗಳು ಈ ಆಲಯಗಳನ್ನು ನಿರ್ಮಿಸಿದ್ದರು. ಇದರಿಂದ ಯೆಹೋವನು ಬಹಳ ಕೋಪಗೊಂಡಿದ್ದನು. ಯೋಷೀಯನು ಬೇತೇಲಿನಲ್ಲಿ ಆರಾಧನೆಯ ಸ್ಥಳಗಳನ್ನು ನಾಶಪಡಿಸಿದಂತೆ ಆ ಆಲಯಗಳನ್ನೂ ನಾಶಗೊಳಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲ್ ರಾಜರು ಸಮಾರ್ಯದ ಪಟ್ಟಣಗಳಲ್ಲಿ ಪೂಜಾಸ್ಥಳಗಳನ್ನು ಗುಡಿಗಳನ್ನು ಕಟ್ಟಿಸಿ, ಯೆಹೋವನ ಕೋಪಕ್ಕೆ ಕಾರಣವಾದಂಥವುಗಳನ್ನು ಯೋಷೀಯನು ತೆಗೆದುಕೊಂಡು, ಬೇತೇಲಿನಲ್ಲಿ ನಾಶಮಾಡಿದ ಹಾಗೆ ಅವೆಲ್ಲವನ್ನು ನಾಶಮಾಡಿದನು.
Kannada BSI Bible 2016
ಕೋಪವನ್ನೆಬ್ಬಿಸುವದಕ್ಕೆ ಇಸ್ರಾ ಯೇಲಿನ ಅರಸುಗಳು ಸಮಾರ್ಯದ ಪಟ್ಟಣಗಳಲ್ಲಿ ಮಾಡಿದ, ಕರ್ತನ ಕೋಪವನ್ನೆಬ್ಬಿಸಿದ ಉನ್ನತ ಸ್ಥಳಗಳ ಮನೆಗಳನ್ನೆಲ್ಲಾ ಯೋಷೀಯನು ಕೆಡವಿಹಾಕಿ ಬೇತೇಲಿ ನಲ್ಲಿ ತಾನು ಮಾಡಿದ ಎಲ್ಲಾ ಕ್ರಿಯೆಗಳ ಪ್ರಕಾರ ಅವುಗಳಿಗೆ ಮಾಡಿ,
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ ರಾಜರು ಸಮಾರ್ಯದ ಪಟ್ಟಣಗಳಲ್ಲಿ ಕಟ್ಟಿಸಿದಂಥ ಯೆಹೋವನ ಕೋಪಕ್ಕೆ ಕಾರಣವಾಗಿದ್ದಂಥ ಪೂಜಾಸ್ಥಳಗಳ ಗುಡಿಗಳಿಗೆ ಬೇತೇಲಿಗಾದ ಗತಿಯೇ ಆಯಿತು.
Kannada Bible (KNCL) BSI 2016
ಇಸ್ರಯೇಲ್ ರಾಜರು ಸಮಾರಿಯ ಪಟ್ಟಣಗಳಲ್ಲಿ ಕಟ್ಟಿಸಿದಂಥ ಹಾಗು ಸರ್ವೇಶ್ವರನ ಕೋಪಕ್ಕೆ ಕಾರಣವಾಗಿದ್ದಂಥ ಪೂಜಾಸ್ಥಳಗಳಲ್ಲಿದ್ದ ಗುಡಿಗಳಿಗೆ ಬೇತೇಲಿಗಾದ ಗತಿಯೇ ಆಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲಿನ ಅರಸರು ಸಮಾರ್ಯದ ಪಟ್ಟಣಗಳಲ್ಲಿ ಮಾಡಿದ ಯೆಹೋವ ದೇವರ ಕೋಪಕ್ಕೆ ಕಾರಣವಾಗಿದ್ದ ಉನ್ನತ ಪೂಜಾಸ್ಥಳಗಳನ್ನು ಯೋಷೀಯನು ಕೆಡವಿಹಾಕಿ, ಬೇತೇಲಿನಲ್ಲಿ ತಾನು ಮಾಡಿದಂತೆ ಅವುಗಳಿಗೆ ಮಾಡಿದನು.